ಚೆಟ್ಟಳ್ಳಿ, ಡಿ. ೩: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚೆಟ್ಟಳ್ಳಿ ಹಾಗೂ ಕೆಮಿಕಲ್ಸ್ ಮತ್ತು ಫರ್ಟಿಲೈರ್ಸ್ ಲಿಮಿಟೆಡ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಾ.೫ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಪ್ರಯೋಗ ಕೇಂದ್ರದ ಮೇಲ್ವಿಚಾರಕರಾದ ಡಾ. ರಾಜೇಂದ್ರನ್ ಎಸ್., ಕೇಂದ್ರಿಯ ತೋಟಗಾರಿಕಾ ಪ್ರಯೋಗ ಕೇಂದ್ರ ಚೆಟ್ಟಳ್ಳಿಯ ವಿಜ್ಞಾನಿ ಡಾ. ಮಧು ಜಿ.ಎಸ್., ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈರ್ಸ್ ಲಿಮಿಟೆಡ್ನ ಮಾರ್ಕೆಟಿಂಗ್ ಡೆಪ್ಯೂಟಿ ಮ್ಯಾನೇಜರ್ ಧೃತಿರಾಜ್ ಬಿ.ಎಸ್, ಭಾಗವಹಿಸಲಿದ್ದಾರೆ.