ಶನಿವಾರಸAತೆ, ಡಿ. ೩: ಪಟ್ಟಣದ ಶ್ರೀರಾಮ ಮಂದಿರದಲ್ಲಿ ತಾ. ೫ ರಂದು ಸಂಜೆ ೫ ಗಂಟೆಯಿAದ ಹನುಮ ಜಯಂತಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಗಣಪತಿ ಪೂಜೆ, ಪುಣ್ಯಾಹ, ಕಲಶಾರಾಧನೆ, ರಾಮತಾರಕ ಮತ್ತು ಆಂಜನೇಯ ಹೋಮ, ಪೂರ್ಣಾಹುತಿ ಮತ್ತು ಮಹಾಮಂಗಳಾರತಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಸಂಜೆ ೭.೩೦ಕ್ಕೆ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.