ಕುಶಾಲನಗರ, ಡಿ. ೪: ರಾಷ್ಟಿçÃಯ ಮಾನವ ಹಕ್ಕುಗಳ ರಕ್ಷಣಾ ಪಡೆ ಕೊಡಗು ಜಿಲ್ಲಾ ಘಟಕ ಮತ್ತು ಸಂಗಮ ಟಿ.ವಿ ಸಹಯೋಗದೊಂದಿಗೆ ೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ವನ್ನು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗೌರವಿಸುವುದು ಸಂಘ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದರು.

ರಕ್ಷಣಾ ಪಡೆಯ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ಎಂ. ರಘು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಸಂಸ್ಥಾಪಕ ಸಿ.ಹೆಚ್. ಚಂದ್ರಕುಮಾರ್, ರಾಜ್ಯಾಧ್ಯಕ್ಷ ಬಿ. ಕೃಷ್ಣಪ್ಪ, ಪೊಲೀಸ್ ಉಪ ಅಧೀಕ್ಷಕ ಗಂಗಾಧರಪ್ಪ, ಇಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಡಾ. ಸೀನಪ್ಪ, ನಿವೃತ್ತ ಪ್ರಾಂಶುಪಾಲ ಹೆಚ್.ವಿ. ಶಿವಪ್ಪ, ಹಿರಿಯ ನಾಗರಿಕರಾದ ವಿ.ಎನ್. ವಸಂತಕುಮಾರ್, ಪೊಲೀಸ್ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್ ಮತ್ತಿತರರು ಇದ್ದರು. ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ವೆಂಕಟೇಶ್ ಪೂಜಾರಿ, ಚಿತ್ರಕಲಾ ಶಿಕ್ಷಕ ಉ.ರಾ ನಾಗೇಶ್, ಡಿ.ವೈ.ಎಸ್.ಪಿ. ಗಂಗಾಧರಪ್ಪ, ಪ್ರಾಂಶುಪಾಲ ಡಾ. ಸೀನಪ್ಪ, ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್, ಸಮಾಜ ಸೇವಕರಾದ ಭಾಸ್ಕರ್ ನಾಯಕ್, ಶುಭಗೌಡ, ಡಿ.ಆರ್. ಪ್ರಭಾಕರ್, ಶಾಂತಕುಮಾರ್, ದಿನೇಶ್ ಆಚಾರಿ, ಮುಖ್ಯ ಶಿಕ್ಷಕಿ ಬಿ.ಎನ್. ಪುಷ್ಪ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.