ಸೋಮವಾರಪೇಟೆ, ಡಿ. ೪: ಇಲ್ಲಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ವೆಂಕಟೇಶ್ ನಾಯಕ್ ಅವರು ಪದೋನ್ನತಿಯೊಂದಿಗೆ ವರ್ಗಾವಣೆಯಾಗಿದ್ದು, ಇವರನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಕಳೆದ ಆರು ವರ್ಷಗಳಿಂದ ಇಲಾಖೆಯ ಸಹಾಯಕ ಇಂಜಿನಿಯರ್ ಆಗಿ ಹಾಗೂ ಪಟ್ಟಣ ಪಂಚಾಯಿತಿ ಹೆಚ್ಚುವರಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಸೇವಾ ಜೇಷ್ಠತೆಯಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ (ಎಇಇ) ಬಡ್ತಿ ನೀಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಮುಂಬಡ್ತಿ ಹೊಂದಿದ ವೆಂಕಟೇಶ್ ನಾಯಕ್ ಅವರನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರು ಮಠದ ಪರವಾಗಿ ಸನ್ಮಾನಿಸಿದರು. ಈ ಸಂದರ್ಭ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.