ಶ್ರೀಮಂಗಲ, ಡಿ. ೫: ಪೊನ್ನಂಪೇಟೆ ಕೊಡವ ಸಮಾಜದ ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ಕೊಡವ ಸಾಂಸ್ಕೃತಿಕ ದಿನ ಮತ್ತು ಪುತ್ತರಿ ಕೋಲ್ ಮಂದ್ ನಮ್ಮೆಯನ್ನು ತಾ. ೨೦ರಂದು ಸಮಾಜದಲ್ಲಿ ಆಯೋಜಿಸಿರುವುದಾಗಿ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ತಿಳಿಸಿದ್ದಾರೆ.

ಸೋಮವಾರ ಸಮಾಜದ ಆಡಳಿತ ಮಂಡಳಿಯ ಸಭೆಯಲ್ಲಿ ಮಾತನಾಡಿದ ಅವರು ತಾ.೨೦ ರಂದು ಪೂರ್ವಾಹ್ನ ೯ ಗಂಟೆಯಿAದ ಮಧ್ಯಾಹ್ನದವರೆಗೆ ಪುತ್ತರಿ ಕೋಲಾಟ್, ಬೊಳಕಾಟ್, ಉಮ್ಮತ್ತಾಟ್, ಪರೆಯಕಳಿ, ಕಪ್ಪೆಯಾಟ್, ವಾಲಗತಾಟ್ ಪೈಪೋಟಿಯನ್ನು ಏರ್ಪಡಿಸಲಾಗಿದೆ. ಕಿರಿಯರು ಹಾಗೂ ಹಿರಿಯರು ಎಂಬ ಎರಡು ವಿಭಾಗದಲ್ಲಿ ಪೈಪೋಟಿಯನ್ನು ನಡೆಸಲಾಗುತ್ತದೆ. ಆಸಕ್ತರು ತಾ.೧೨ರ ಒಳಗೆ ತಮ್ಮ ಹೆಸರು ವಿವರವನ್ನು ಸಮಾಜದ ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬೇಕಾಗಿದೆ ಎಂದು ಅವರು ವಿವರಿಸಿದರು.

ಮಧ್ಯಾಹ್ನದ ನಂತರ ೨ ಗಂಟೆಯಿAದ ೨.೩೦ ಗಂಟೆವರೆಗೆ ಕೊಡವ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ಏರ್ಪಡಿಸಲಾಗಿದೆ

ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಾಂಪ್ರದಾಯಿಕ ಪುತ್ತರಿ ಕೋಲ್ ಮಂದ್ ಕಾರ್ಯಕ್ರಮ ನಡೆಯಲಿದೆ. ಇದಲ್ಲದೆ ಈ ಕಾರ್ಯಕ್ರಮದಲ್ಲಿ ಕೊಡವ ಜನಾಂಗದಲ್ಲಿ ವರ ವಧು ಅನ್ವೇಷಣೆಗಾಗಿ ತಂದ್- ಬೆಂದು ಕಾರ್ಯಕ್ರಮದ ನೋಂದಣಿಯನ್ನು ಮಾಡಲಾಗುತ್ತದೆ ಇದರ ಪ್ರಯೋಜನವನ್ನು ಜನಾಂಗದವರು ಪಡೆದುಕೊಳ್ಳುವಂತೆ ಕೋರಿದರು.

ಸಭೆಯಲ್ಲಿ ಸಮಾಜದ ಉಪಾಧ್ಯಕ್ಷ ಚಿರಿಯಪಂಡ ಇಮ್ಮಿ ಉತ್ತಪ್ಪ, ಗೌರವ ಕಾರ್ಯದರ್ಶಿ ಕೋಟೆರ ಕಿಶನ್ ಉತ್ತಪ್ಪ, ಜಂಟಿ ಕಾರ್ಯದರ್ಶಿ ಆಲೇಮಾಡ ಸುಧೀರ್, ಖಜಾಂಚಿ ಕಳ್ಳಿಚಂಡ ಕಟ್ಟಿ ಪೂಣಚ್ಚ, ಖಾಯಂ ಆಹ್ವಾನಿತರಾದ ಚೆಪ್ಪುಡೀರ ಕಿಟ್ಟು ಅಯ್ಯಪ್ಪ, ನಿರ್ದೇಶಕರುಗಳಾದ ಚೆಪ್ಪುಡೀರ ರಾಕೇಶ್ ದೇವಯ್ಯ, ಅಡ್ಡಂಡ ಸುನಿಲ್ ಸೋಮಯ್ಯ, ಕೊಣಿಯಂಡ ಸಂಜು ಸೋಮಯ್ಯ, ಚೀರಂಡ ಕಂದಾ ಸುಬ್ಬಯ್ಯ, ಮೂಕಳಮಾಡ ಅರಸು ನಂಜಪ್ಪ, ಮೂಕಳೇರ ಕಾವ್ಯ ಕಾವೇರಮ್ಮ, ಚೊಟ್ಟೆಕಾಳಪಂಡ ಆಶಾ ಪ್ರಕಾಶ್ ಹಾಜರಿದ್ದರು.