ಮುಳ್ಳೂರು, ಡಿ. ೫: ಸ್ಥಳೀಯ ಪ್ರಜ್ವಲ್ ಎಜುಕೇಶನ್ ಟ್ರಸ್ಟ್ ಮತ್ತು ಕಾವೇರಿ ಸಂಯುಕ್ತ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಕಾವೇರಿ ಸಂಭ್ರಮ’ ತಾ. ೯ ಮತ್ತು ೧೦ ರಂದು ನಡೆಯಲಿದೆ ಎಂದು ವಿದ್ಯಾಸಂಸ್ಥೆಯ ಪ್ರಕಟಣೆ ತಿಳಿಸಿದೆ. ವಾರ್ಷಿಕೋತ್ಸವ ಅಂಗವಾಗಿ ತಾ. ೯ ರಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೬ ಗಂಟೆ ವರೆಗೆ ಸಾರ್ವಜನಿಕ ಪುರುಷ ಮತ್ತು ಮಹಿಳೆಯರು ಹಾಗೂ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, ಗ್ರಾಮ ಲೆಕ್ಕಾಧಿಕಾರಿ ಎಸ್.ಎ. ಅಬ್ದುಲ್ ರಜಾಕ್ ಉದ್ಘಾಟಿಸುವರು. ತಾ. ೧೦ ರಂದು ಮಧ್ಯಾಹ್ನ ೨ ಗಂಟೆಗೆ ನಡೆಯಲಿರುವ ಸಮಾರೋಪ ಕಾರ್ಯಕ್ರಮವನ್ನು ಪ್ರಜ್ವಲ್ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ಎಚ್.ಪಿ. ಗುಂಡಪ್ಪ ಉದ್ಘಾಟಿಸಲಿದ್ದು, ವಿದ್ಯಾಸಂಸ್ಥೆ ಕಾರ್ಯದರ್ಶಿ ಜಿ.ಎಂ. ಹೂವಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿದೆೆÃðಶಕ ಸಿ. ಪುಟ್ಟರಾಜು, ಕೂಡಿಗೆ ಡಯಟ್ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಕೆ.ಎಸ್. ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಸಿಆರ್‌ಪಿಗಳಾದ ಜಿ.ಎಂ. ಹೇಮಂತ್, ಸಿ.ಕೆ. ದಿನೇಶ್, ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಕಿರಣ್, ವಿದ್ಯಾಸಂಸ್ಥೆಯ ಪ್ರಾಂಶುಪಾಲ ಎಚ್.ಎನ್. ದೇವರಾಜ್ ಮತ್ತು ವಿದ್ಯಾಸಂಸ್ಥೆ ನಿರ್ದೇಶಕರು ಪಾಲ್ಗೊಳ್ಳುವರು.