ಕೂಡಿಗೆ, ಡಿ. ೫: ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ನೂತನ ಡೀನ್ ಆಗಿ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಂ. ಜಯಶಂಕರ್ ನೇಮಕಗೊಂಡಿದ್ದಾರೆ.

ಪ್ರೊ. ಎಂ. ಜಯಶಂಕರ್ ಚಿಕ್ಕ ಆಳುವಾರ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಡೀನ್ ಪ್ರೊ. ಜಯಶಂಕರ್ ಅವರು, ಜ್ಞಾನಕಾವೇರಿ ಸ್ನಾತಕೋತ್ತರ ಸಂಸ್ಥೆಯ ಪ್ರಾರಂಭಿಕ ಹಂತದಲ್ಲಿ ಸಂಯೋಜಕರಾಗಿ ಕೈಗೊಂಡ ಕೆಲಸ ಕಾರ್ಯಗಳನ್ನು ಕುರಿತು ತಿಳಿಸಿದರು. ಮುಂದಿನ ದಿನಗಳಲ್ಲಿ ಸಂಸ್ಥೆಯ ಸರ್ವ ತ್ತೋಮುಖ ಅಭಿವೃದ್ಧಿಗೆ ಬೇಕಾದ ಸಹಕಾರವನ್ನು ನೀಡುವುದಾಗಿ ನುಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಭಾರ ನಿರ್ದೇಶಕರಾದ ಡಾ. ಕೆ.ಕೆ. ಧರ್ಮಪ್ಪ, ಜೀವರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಕೆ. ಎಸ್. ಚಂದ್ರಶೇಖರಯ್ಯ, ಯೋಗ ವಿಜ್ಞಾನ ವಿಭಾಗದ ಸಂಯೋಜಕರಾದ ಡಾ. ಶಾಮಸುಂದರ ಜೆ., ಸೂಕ್ಷಾö್ಮಣುಜೀವ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಡಾ. ಬಿ. ಎಸ್. ಗುಣಶ್ರೀ, ಎಸ್‌ಸಿ ಎಸ್ಟಿ ಸೆಲ್‌ನ ಸಂಯೋಕರಾದ ರಾಜಕುಮಾರ ಎಸ್ ಮೇಟಿ, ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಐ. ಕೆ. ಮಂಜುಳಾ, ಡಾ. ಸ್ನೇಹರಾಣಿ, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.