ಸಿದ್ದಾಪುರ, ಡಿ. ೫: ಕುಶಾಲನಗರ ತಾಲೂಕು ತಹಶೀಲ್ದಾರ್ ಆದೇಶದ ಮೇರೆಗೆ ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ವತಿಯಿಂದ ಪೌತಿ ಖಾತೆ ಆಂದೋಲನಕ್ಕೆ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕುಶಾಲನಗರ ತಾಲೂಕು ಉಪತಹಶೀಲ್ದಾರ್ ಮಧುಸೂದನ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಸರ್ಕಾರವು ನೂತನವಾಗಿ ಜಾರಿಗೆ ತಂದಿರುವ ಪೌತಿ ಖಾತೆ ಆಂದೋಲನದಿAದಾಗಿ ಗ್ರಾಮಸ್ಥರಿಗೆ ಅನುಕೂಲವಾಗಿದೆಂದರು. ಅಲ್ಲದೇ ಪೌತಿ ಖಾತೆಗೆ ಸಂಬAಧಿಸಿದ ಮಾಹಿತಿಗಳನ್ನು ನೀಡಿದರು.

ಈ ಸಂದರ್ಭ ಕುಶಾಲನಗರ ಕಂದಾಯ ಪರಿವೀಕ್ಷಕರಾದ ಸಂತೋಷ್, ಗ್ರಾಮ ಲೆಕ್ಕಿಗ ಸಚಿನ್, ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ ಹಕ್ಕೀಂ ಹಾಜರಿದ್ದರು. ಗ್ರಾಮದ ೫ ಅರ್ಜಿಗಳು ಪೌತಿ ಖಾತೆಗೆ ಸ್ವೀಕರಿಸಿದರು.