ಮಡಿಕೇರಿ, ಡಿ. ೫: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಇಂಜಿನಿಯರಿAಗ್ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) ೨೦೨೨-೨೩ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ ೩೧ ಕೊನೆಯ ದಿನ. ಕಾರ್ಮಿಕರ ಮಾಸಿಕ ವೇತನ ರೂ. ೩೫ ಸಾವಿರಕ್ಕಿಂತ ಮೀರಿರಬಾರದು. (ಒಂದು ಕುಟುಂಬ ದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು). ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್ಸೈಟ್ನಲ್ಲಿ WWW.ಞಟತಿbಚಿಠಿಠಿs. ಞಚಿಡಿಟಿಚಿಣಚಿಞಚಿ. gov.iಟಿ ಅರ್ಜಿ ಸಲ್ಲಿಸಬಹುದು. (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. ೫೦ ಪ.ಜಾ-ಪ.ಪಂ. ಶೇ. ೪೫ ರಷ್ಟು ಅಂಕ ಪಡೆದು ತೇರ್ಗಡೆಯಾಗಿರ ಬೇಕು) ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. ೪೮, ೧ನೇ ಮತ್ತು ೨ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-೫೬೦೦೨೨ ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: ೦೮೦-೨೩೪೭೫೧೮೮, ೮೨೭೭೨೯೧೧೭೫, ೮೨೭೭೧೨೦೫೦೫, ೯೧೪೧೫೮೫೪೦೨, ೯೧೪೧೬೦೨೫೬೨ ನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.