ಕೂಡುಮಂಗಳೂರು, ಡಿ. ೫: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಮೊದಲಿಗೆ ೧೫ ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾ ಯೋಜನೆಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಹಾಜರಿದ್ದ ಸರ್ವ ಸದಸ್ಯರು ಸಭೆಯ ಮೂಲಕ ಒತ್ತಾಯ ಮಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಹಾಜರಿದ್ದ ಸರ್ವ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅಲ್ಲದೆ ತುರ್ತಾಗಿ ಶುಚಿತ್ವಗೆ ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿಕೊಂಡು ಎಲ್ಲಾ ವಾರ್ಡ್ಗಳನ್ನು ಶುಚಿತ್ವಗೊಳಿಸುವ ಬಗ್ಗೆ ತೀರ್ಮಾನ ಕೈಗೊಂಡರು.
ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಕುಡಿಯುವ ನೀರಿನ ಯೋಜನೆ ಮತ್ತು ಇತರೆ ಕಾಮಗಾರಿಗಳು ಉಪ ರಸ್ತೆಗಳ ಕಾಮಗಾರಿಗಳನ್ನು ಸರಿಯಾದ ರೀತಿಯಲ್ಲಿ ಪೂರ್ಣಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಪತ್ರ ವ್ಯವಹಾರವನ್ನು ನಡೆಸುವಂತೆ ಸಭೆಯಲ್ಲಿ ಚರ್ಚೆಗಳು ನಡೆಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಚಿತ್ವದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಸ್ವಚ್ಛತೆಯನ್ನು ಕಾಪಾಡಲು ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿ, ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಕೈಗೊಳ್ಳುವ ವಿಷಯದ ಬಗ್ಗೆ ಚರ್ಚಿಸಲಾಯಿತು.
ಅಭಿವೃದ್ಧಿ ಅಧಿಕಾರಿ ಸಂತೋಷ್ ಸಭೆಗೆ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಶುಚಿತ್ವಕ್ಕೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮೂಲ ಭೂತ ಸೌಕರ್ಯಗಳಿಗೆ ಹೆಚ್ಚಿನ ಆಧ್ಯತೆಯನ್ನು ನೀಡಲಾಗುವುದು. ಸಭೆಯಲ್ಲಿ ಗ್ರಾಮಗಳ ಅಭಿವೃದ್ಧಿ ಪೂರಕವಾದ ಅಂಶಗಳ ಬಗ್ಗೆ ಹಾಜರಿದ್ದ ಸದಸ್ಯರು ಉತ್ತಮ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸೇರಿದಂತೆ ಸದಸ್ಯರು ಹಾಜರಿದ್ದರು.