ಮಡಿಕೇರಿ, ಡಿ. ೬: ಮಡಿಕೇರಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವೀರಾಜ ಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿ ಗಳು ಭಾಗವಹಿಸಿ ಬಹುಮಾನವನ್ನು ಪಡೆದಿದ್ದಾರೆ. ಭಾಷಣ ಸ್ಪರ್ಧೆಯಲ್ಲಿ ೯ನೇ ತರಗತಿಯ ವಿದ್ಯಾರ್ಥಿನಿ ಮೋಕ್ಷ ಎ.ಕೆ ದ್ವಿತೀಯ ಸ್ಥಾನವನ್ನು ಹಾಗೂ ಛದ್ಮವೇಷ ಸ್ಪರ್ಧೆಯಲ್ಲಿ ೮ನೇ ತರಗತಿಯ ವಿದ್ಯಾರ್ಥಿನಿ ಕ್ಷಮಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.