ಕೂಡಿಗೆ, ಡಿ. ೮: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ ಭೂಮಿ ಸುಸ್ಥಿರ ಅಭಿವೃದ್ಧಿ ಸಂಸ್ಥೆ, ಮತ್ತು ಕೃಷಿ ಇಲಾಖೆ ಸೋಮವಾರಪೇಟೆ ಸಂಯುಕ್ತ ಆಶ್ರಯದಲ್ಲಿ ಹುಲುಸೆ ಗ್ರಾಮದ ಹೆಚ್.ಸಿ. ಜಯಪ್ಪ ಅವರ ಭತ್ತದ ಗದ್ದೆಯಲ್ಲಿ ದೇಶಿಯ ಭತ್ತದ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಡಾ. ಶಬಾನಾ ಎಂ.ಶೇಖ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಲುಸೆಯ ಹೆಚ್.ಎನ್. ಶಿವರುದ್ರಪ್ಪ ವಹಿಸಲಿದ್ದಾರೆ.