ಮಡಿಕೇರಿ, ಡಿ.೮ : ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದೆ.

ತಾ. ೧೩ ರಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ತಾ. ೧೬ ರಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಾಗೂ ತಾ.೨೦ ರಂದು ಗೋಣಿಕೊಪ್ಪ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದೆ.

೧೦ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿAಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ೩೦೦ ಕ್ಕಿಂತ ಹೆಚ್ಚು ಉದ್ಯೋಗಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗಾಕಾಂಕ್ಷಿಗಳು hಣಣಠಿs://ಜಿoಡಿms.gಟe/ಇಡಿಛಿWUಟಿಉಥಿಠಿs೪Svಎಖಡಿ೭ ಗೂಗಲ್ ಲಿಂಕ್/ಅಥವಾ ಕೋಡ್ ಮೂಲಕ ನೋಂದಾಯಿಸಿಕೊAಡು ತಮ್ಮ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ವೈಯಕ್ತಿಕ ವಿವರಗಳ(ಬಯೋ ಡಾಟಾ) ಕನಿಷ್ಟ ೧೦ ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು. ಅಲ್ಲದೇ ಉದ್ಯೋಗ ಮೇಳ ನಡೆಯುವ ಕೇಂದ್ರದಲ್ಲಿಯೂ ಅಭ್ಯರ್ಥಿಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಡಗು ಜಿಲ್ಲೆ, ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ.ಸಂ.೦೮೨೭೨-೨೨೫೮೫೧/ ೯೭೩೮೩೬೧೫೦೨/ ೮೧೨೩೩೧೨೩೧೯/ ೮೨೯೬೦೨೦೮೨೬ ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.