ಕುಶಾಲನಗರ, ಡಿ. ೮: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಕುಶಾಲನಗರದ ಶ್ರೀ ಗಣಪತಿ ದೇವಾಲಯ ಮುಂಭಾಗ ವಿಜಯೋತ್ಸವ ಆಚರಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಶಿವಶಂಕರ್, ಪ್ರಕಾಶ್, ಮುಸ್ತಾಫ, ಚಂದ್ರು, ರಾಜೇಂದ್ರ, ಖಲೀಮುಲ್ಲಾ, ದೇವು ಮತ್ತಿತರರು ಇದ್ದರು.