ಕೂಡಿಗೆ, ಡಿ. ೮: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರದಲ್ಲಿ ಗುಜರಾತ್ ರಾಜ್ಯದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಧಿಕ ಸ್ಥಾನಗಳಿಸಿದ ಹಿನ್ನೆಲೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಪಟಾಕಿ ಸಿಡಿಸಿ ಜನರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು

ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ್, ಗಿರೀಶ್, ಗುತ್ತಿಗೆದಾರ ಶಶಿಕಿರಣ್, ಸೇರಿದಂತೆ ಬೂತ್ ಸಮಿತಿಯ ಸದಸ್ಯರಾದ ಮಂಜುನಾಥ, ರವಿ, ಅರಸ್, ಪುನೀತ್ , ಸಂತೋಷ ಮುರುಗೇಶ್, ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.