ಸೋಮವಾರಪೇಟೆ, ಡಿ. ೮: ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆ ಪಟ್ಟಣದಲ್ಲಿ ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ ನಡೆಯಿತು.

ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ ನೇತೃತ್ವದಲ್ಲಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಬಿಜೆಪಿ ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಮುಖಂಡರುಗಳಾದ ಎಂ.ಬಿ. ಅಭಿಮನ್ಯುಕುಮಾರ್, ಪ್ರವೀಣ್ ತಣ್ಣೀರುಹಳ್ಳ, ಹೆಚ್.ಎನ್. ಅಶೋಕ್, ಕೊಮಾರಿ ಸತೀಶ್, ಪ್ರಸನ್ನ, ಕಿಬ್ಬೆಟ್ಟ ಧರ್ಮಪ್ಪ, ಪೃಥ್ವಿ, ಮಿಲನ್, ಮಹಿಳಾ ಮೋರ್ಚಾದ ಮಂಜುಳಾ ಸುಬ್ರಮಣಿ, ಹೆಚ್.ಎನ್. ತಂಗಮ್ಮ, ಲೀಲಾ ನಿರ್ವಾಣಿ, ಅನಿತ, ರೇಣುಕಾ ವೆಂಕಟೇಶ್, ಇಂದಿರಾ ಮೋಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.