ಸೋಮವಾರಪೇಟೆ,ಡಿ.೮: ಕ್ಷÄಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ ನಡೆಸಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಸೋಮವಾರಪೇಟೆ ನ್ಯಾಯಾಲಯ ಆರೋಪಿಗಳಿಬ್ಬರಿಗೆ ೩ ವರ್ಷ ಜೈಲು ಶಿಕ್ಷೆ ವಿಧಿಸಿದೆ.

ತಾಲೂಕಿನ ದೊಡ್ಡಮಳ್ತೆ ಗ್ರಾಮದ ಕೃಷ್ಣಪ್ಪ ಮತ್ತು ಅವರ ಪತ್ನಿ ಇಂದಿರಾ ಅವರುಗಳಿಗೆ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ಕಳೆದ ತಾ. ೨೩-೦೪-೨೦೧೮ರ ರಾತ್ರಿ ದೊಡ್ಡಮಳ್ತೆ ಗ್ರಾಮದ ರುದ್ರಪ್ಪ ಎಂಬವರ ಪತ್ನಿ ರುಕ್ಮಿಣಿ ಅವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸೋಮವಾರಪೇಟೆ ಪೊಲೀಸರು ಐಪಿಸಿ ೪೪೭, ೫೨೪, ೫೦೪, ೫೦೬, ರೆಡ್ ೩೪/ಐಪಿಸಿ ಅನ್ವಯ ದೂರು ದಾಖಲಿಸಿ, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಈರ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಆರೋಪಿಗಳ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೆಎಂಎಫ್‌ಸಿ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪಿರ್ಯಾದುದಾರರ ಪರವಾಗಿ ಎಪಿಪಿ ಹೇಮಂತ್ ಪೊನ್ನಪ್ಪ ಅವರು ವಾದ ಮಂಡಿಸಿದ್ದರು.