ಮಡಿಕೇರಿ, ಡಿ. ೯: ಅತ್ಯುತ್ತಮ ಸಮಾಜ ನಿರ್ಮಾಣದ ಹಾದಿಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಭಾರತ ಸೇವಾದಳದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಹಾಗೂ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಭಾರತ ಸೇವಾದಳ ಭವನದಲ್ಲಿ ಶಾಲಾ ಶಿಕ್ಷಕರುಗಳಿಗೆ ನಡೆದ ಭಾರತ ಸೇವಾದಳದ ಪುನಶ್ಚೇತನ ಶಿಬಿರ ಹಾಗೂ ಮಡಿಕೇರಿ ತಾಲೂಕು ಸಮಿತಿಯ ನೂತನ ಸದಸ್ಯರುಗಳಿಗೆ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರö್ಯ ಹೋರಾಟದ ಹಿನ್ನೆಲೆಯಿರುವ ಭಾರತ ಸೇವಾದಳವು ಕೊಡಗು ಜಿಲ್ಲೆಯಲ್ಲಿ ಉನ್ನತ ಮಟ್ಟಕ್ಕೆ ಏರಬೇಕೆಂದರೆ, ಈ ಭಾಗದಲ್ಲಿ ಶಾಲಾ ಶಿಕ್ಷಕರು ತಮ್ಮ ಕರ್ತವ್ಯ ನಿರ್ವಹಣೆ ಯಲ್ಲಿ ಸೇವಾ ಮನೋಭಾವದಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿ ಗಳಲ್ಲಿ ರಾಷ್ಟçಭಕ್ತಿ ಮೂಡಿಸುವ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕಾಗಿದೆ ಎಂದು ಶಿಕ್ಷಕ ಸಮುದಾಯಕ್ಕೆ ಕರೆ ನೀಡಿದರು.

ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ವಿದ್ಯಾರ್ಥಿಗಳನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಅವರಲ್ಲಿ ಸಂಯಮ, ಧೈರ್ಯ, ತ್ಯಾಗ, ಸರಳತೆ, ಶಿಕ್ಷಕರು ತಮ್ಮ ಕರ್ತವ್ಯ ನಿರ್ವಹಣೆ ಯಲ್ಲಿ ಸೇವಾ ಮನೋಭಾವದಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿ ಗಳಲ್ಲಿ ರಾಷ್ಟçಭಕ್ತಿ ಮೂಡಿಸುವ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕಾಗಿದೆ ಎಂದು ಶಿಕ್ಷಕ ಸಮುದಾಯಕ್ಕೆ ಕರೆ ನೀಡಿದರು.

ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ವಿದ್ಯಾರ್ಥಿಗಳನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಅವರಲ್ಲಿ ಸಂಯಮ, ಧೈರ್ಯ, ತ್ಯಾಗ, ಸರಳತೆ, ಜಿಲ್ಲಾ ಸಮಿತಿ ಸದಸ್ಯರುಗಳಾದ ಕೆ.ಆರ್. ಧರ್ಮಪಾಲ, ಡಿ.ಎನ್. ಉಷಾ ಕುಮಾರಿ ಹಾಗೂ ಎಂ.ಎಸ್. ತಮ್ಮಯ್ಯ ಉಪಸ್ಥಿತರಿದ್ದರು.

ಸದಸ್ಯೆ ಡಿ.ಎಂ. ರೇವತಿ ಪ್ರಾಸ್ತಾವಿಕ ಭಾಷಣ ಮಾಡಿದರು. ಶಿಕ್ಷಕಿ ವಂಜಮ್ಮ ಭಕ್ತಿ ಗೀತೆ ಹಾಡಿದರು. ಸದಸ್ಯ ಹಾಗೂ ಶಿಕ್ಷಕ ಹೆಚ್.ಎ. ಪ್ರಸನ್ನ ಕುಮಾರ್ ನಿರೂಪಿಸಿ, ಶಿಕ್ಷಕಿ ಪಿ.ಎಸ್. ವಿಮಲ ಸ್ವಾಗತಿಸಿ, ಶಿಕ್ಷಕ ರಾಘವೇಂದ್ರ ಶೆಟ್ಟಿ ವಂದಿಸಿದರು. ಜಿಲ್ಲಾ ಸಂಘಟಕ ಜಿ.ಈ. ರೇವಣ್ಣ ಗೌರವ ವಂದನೆ ಸಲ್ಲಿಸಿದರು.