ಗಡಿ ವಿವಾದ:ಗೃಹ ಸಚಿವ ಅಮಿತ್ ಶಾ ಭೇಟಿ!
ನವದೆಹಲಿ, ಡಿ. ೯: ಮಹಾರಾಷ್ಟç - ಕರ್ನಾಟಕ ಎರಡು ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊAದಿಗೆ ಮಹತ್ವ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ತಾ. ೧೪ ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟç ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿದ್ದಾರೆ. ದೆಹಲಿಯಲ್ಲಿ ಮಹಾರಾಷ್ಟç ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಶಿರೂರಿನ ಲೋಕಸಭಾ ಸದಸ್ಯ ಕೋಲ್ಹೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ್ದು, ಮಹಾರಾಷ್ಟç ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು ಪೂರ್ಣ ಹಿಂಸಾಚಾರದ ಹಂತಕ್ಕೆ ತಲುಪುವ ಹಂತವನ್ನು ತಲುಪಿದೆ ಎಂದು ಎಂವಿಎ ನಿಯೋಗವು ಸಭೆಯಲ್ಲಿ ಶಾ ಅವರಿಗೆ ಮನವರಿಕೆ ಮಾಡಿದೆ. ಹೀಗಾಗಿ ತಾ. ೧೪ ರಂದು ಮಹಾರಾಷ್ಟç ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಭೆಯನ್ನು ಅಮಿತ್ ಶಾ ಚರ್ಚೆಗೆ ಕರೆದಿದ್ದಾರೆ ಎಂದು ಕೋಲ್ಹೆ ಹೇಳಿದರು. ಕರ್ನಾಟಕ ಮತ್ತು ಮಹಾರಾಷ್ಟç ನಡುವೆ ನಡೆಯುತ್ತಿರುವ ಗಡಿ ವಿವಾದ ತಾರಕಕ್ಕೇರಿದ್ದು, ಉಭಯ ರಾಜ್ಯಗಳಲ್ಲಿ ಹೋರಾಟಗಾರರು ಬಸ್‌ಗಳಿಗೆ ಮಸಿ ಬಳಿದು, ಕಲ್ಲು ಹೊಡೆಯುವ ಕುಕೃತ್ಯನವೆಸಗಿದ್ದು, ಇದು ಉಭಯ ರಾಜ್ಯಗಳ ನಡುವಿನ ಸಾರಿಗೆ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಅಲ್ಲದೆ ಗಡಿ ಗ್ರಾಮಗಳಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದAತಿದ್ದು, ಪರಿಸ್ಥಿತಿ ಯಾವುದೇ ಸಂದರ್ಭದಲ್ಲೂ ಬಿಗಾಡಾಯಿಸಬಹುದು ಎನ್ನಲಾಗಿದೆ.
ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಭಾರೀ ಮಳೆ
ಚೆನ್ನೈ, ಡಿ. ೯: ಮಾಂಡೌಸ್ ಚಂಡಮಾರುತವು ತಮಿಳುನಾಡಿನ ಕರಾವಳಿಗೆ ಸಮೀಪಿಸುತ್ತಿರುವ ಕಾರಣ ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ ಮತ್ತು ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆ ಚೆನ್ನೈನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ(ನುಂಗAಬಾಕ್ಕA ---೭ ಸೆಂ.ಮೀ ಸೇರಿದಂತೆ)ಯಾಗುತ್ತಿದ್ದು, ಚೆನ್ನೈನಿಂದ ತೆರಳುವ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಆದಾಗ್ಯೂ, ಸಬ್ ಅರ್ಬನ್ ರೈಲು ಸೇವೆಗಳು ಸೇರಿದಂತೆ ಇತರೆ ರೈಲುಗಳು ಕಾರ್ಯನಿರ್ವಹಿಸಲಿವೆ. ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ
ನವದೆಹಲಿ, ಡಿ. ೯: ಏಕರೂಪ ನಾಗರಿಕ ಸಂಹಿತೆ ಸಿದ್ಧಪಡಿಸಲು ಸಮಿತಿಗೆ ಅವಕಾಶ ಕಲ್ಪಿಸುವ ವಿವಾದಾತ್ಮಕ ಖಾಸಗಿ ಸದಸ್ಯರ ಮಸೂದೆಯನ್ನು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ವಿರೋಧ ಪಕ್ಷಗಳ ವಿರೋಧದ ನಡುವೆಯೇ ‘ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ, ೨೦೨೦' ಅನ್ನು ಮೇಲ್ಮನೆಯಲ್ಲಿ ಮಂಡಿಸಲಾಯಿತು. ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರು ಏಕರೂಪ ನಾಗರಿಕ ಸಂಹಿತೆಯನ್ನು ಸಿದ್ಧಪಡಿಸಲು ಮತ್ತು ಭಾರತದಾದ್ಯಂತ ಅದರ ಅನುಷ್ಠಾನಕ್ಕಾಗಿ ರಾಷ್ಟಿçÃಯ ತಪಾಸಣೆ ಮತ್ತು ತನಿಖಾ ಸಮಿತಿ ರಚನೆಗೆ ಅವಕಾಶ ಕಲ್ಪಿಸುವ ವಿಧೇಯಕವನ್ನು ಮಂಡಿಸಿದರು. ಈ ಮಸೂದೆ ಮಂಡನೆ ವಿರೋಧಿಸಿ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೃಣಮೂಲ ಕಾಂಗ್ರೆಸ್ ಸದಸ್ಯರು ಪ್ರತಿಭಟಿಸಿದರು. ಇದು ದೇಶದಲ್ಲಿ ಪ್ರಚಲಿತದಲ್ಲಿರುವ ಸಾಮಾಜಿಕ ರಚನೆ ಮತ್ತು ವಿವಿಧತೆಯಲ್ಲಿ ಏಕತೆಯನ್ನು "ನಾಶಗೊಳಿಸುತ್ತದೆ" ಎಂದು ಹೇಳಿದರು. ಈ ಹಿಂದೆ, ಮಸೂದೆಯನ್ನು ಪರಿಚಯಿಸಲು ಪಟ್ಟಿ ಮಾಡಲಾಗಿದ್ದರೂ, ಅದನ್ನು ಮೇಲ್ಮನೆಯಲ್ಲಿ ಮಂಡಿಸಿರಲಿಲ್ಲ. ಸೂಕ್ಷ್ಮ ವಿಷಯವಾಗಿರುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಕುರಿತು ಈಗಾಗಲೇ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆದಿವೆ. ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಕುರಿತು ಚರ್ಚೆಗಳಾಗಿವೆ. ಮಧ್ಯಪ್ರದೇಶ ಏಕರೂಪ ನಾಗರಿಕ ಸಂಹಿತೆ ಮಸೂದೆ ರಚನೆಗಾಗಿ ಕಳೆದ ಡಿ.೨ರಂದು ಸಮಿತಿಯೊಂದನ್ನು ರಚಿಸಿದೆ.
ಅಫ್ತಾಬ್‌ನನ್ನು ನೇಣಿಗೇರಿಸಲು ಆಗ್ರಹ
ಮುಂಬೈ, ಡಿ. ೯: ದೆಹಲಿಯಲ್ಲಿ ತನ್ನ ಮಗಳನ್ನು ಭೀಕರವಾಗಿ ಕೊಲೆ ಮಾಡಿದ ಆಫ್ತಾಬ್ ಪೂನಾವಾಲಾನನ್ನು ನೇಣಿಗೇರಿಸಬೇಕು ಎಂದು ಹತ್ಯೆಗೀಡಾದ ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಅವರು ಒತ್ತಾಯಿಸಿದ್ದಾರೆ. ಇಂದು ಮಹಾರಾಷ್ಟç ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರದ್ಧಾ ತಂದೆ ವಿಕಾಸ್ ವಾಕರ್, "ನನ್ನ ಮಗಳನ್ನು ಕೊಂದ ಅಫ್ತಾಬ್ ಪೂನಾವಾಲಾಗೆ ಗಲ್ಲು ಶಿಕ್ಷೆ ವಿಧಿಸಬೇಕು. ಪೂನಾವಾಲಾ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದರು. "ಶ್ರದ್ಧಾ ನೀಡಿದ ದೂರಿನ ಬಗ್ಗೆ ತನಿಖೆ ನಡೆಸದೆ ವಿಳಂಬ ಮಾಡಿದ ವಸೈ ಮತ್ತು ನಲಸೋಪಾರ ಹಾಗೂ ತುಳಿಂಜ್(ಪಾಲ್ಘರ್ ಜಿಲ್ಲೆಯ) ಪೊಲೀಸ್ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಸಬೇಕು. ಅವರು ತಕ್ಷಣ ಕ್ರಮ ಕೈಗೊಂಡಿದ್ದರೆ, ನನ್ನ ಮಗಳು ಬದುಕುತ್ತಿದ್ದಳು" ಎಂದು ಅವರು ಹೇಳಿದ್ದಾರೆ. ಶ್ರದ್ಧಾ ವಾಕರ್ ಅವರು ನವೆಂಬರ್ ೨೦೨೦ರಲ್ಲಿ ತುಳಿಂಜ್ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು. ಅದರಲ್ಲಿ "ಪೂನಾವಾಲಾ ನನ್ನನ್ನು ನಿಂದಿಸುತ್ತಿದ್ದಾನೆ ಮತ್ತು ನನ್ನನ್ನು ಥಳಿಸುತ್ತಿದ್ದಾನೆ. ಇಂದು ಅವನು ನನ್ನನ್ನು ಉಸಿರುಗಟ್ಟಿಸಿ ಕೊಲ್ಲಲು ಪ್ರಯತ್ನಿಸಿದನು ಮತ್ತು ಅವನು ನನ್ನನ್ನು ಕೊಲ್ಲುತ್ತೇನೆ, ನಿನ್ನನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದು ಎಂದು ಹೆದರಿಸುತ್ತಿದ್ದಾನೆ ಎಂದು ಆರೋಪಿಸಿದ್ದರು. ದೆಹಲಿ ಗವರ್ನರ್ ಮತ್ತು ದೆಹಲಿ ದಕ್ಷಿಣ ಡಿಸಿಪಿ ಹಾಗೂ ಮಹಾರಾಷ್ಟç ಉಪ ಮುಖ್ಯಮಂತ್ರಿ ಫಡ್ನವಿಸ್ ಅವರು ನನಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ ಎಂದು ವಿಕಾಸ್ ವಾಕರ್ ಹೇಳಿದ್ದಾರೆ. ಅಫ್ತಾಬ್ ಪೂನಾವಾಲಾ ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾಳನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆಕೆಯ ದೇಹವನ್ನು ೩೫ ತುಂಡುಗಳಾಗಿ ಕತ್ತರಿಸಿ, ಸುಮಾರು ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟಿದ್ದನು.
ಅಮೇರಿಕ ಕಾಲ್ತೆಗೆದ ಬಳಿಕ ಪಾಕ್‌ನಲ್ಲಿ ಟಿಟಿಪಿ ಚಟುವಟಿಕೆಗಳಿಗೆ ಬಲ!
ನವದೆಹಲಿ, ಡಿ. ೯: ಅಮೇರಿಕ ಅಫ್ಘಾನಿಸ್ತಾನದಿಂದ ಕಾಲ್ತೆಗೆದ ನಂತರ ತೆಹ್ರೀಕ್-ಎ- ಪಾಕಿಸ್ತಾನ (ಟಿಟಿಪಿ) ಚಟುವಟಿಕೆಗಳು ಪಾಕಿಸ್ತಾನದ ಪ್ರದೇಶಗಳಲ್ಲಿ ಬಲಿಷ್ಠಗೊಂಡಿದೆ. ಅಫ್ಘಾನಿಸ್ತಾನದಲ್ಲಿ ಟಿಟಿಪಿ ನೆಲೆ ಹಾಗೆಯೇ ಉಳಿದಿದೆ ಎಂದು ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಪ್ರಾಧಿಕಾರ ಹೇಳಿದೆ. ಟಿಟಿಪಿ ಶಾಂತಿ ಮಾತುಕತೆ ಪ್ರಕ್ರಿಯೆಯ ವೇಳೆ ತನ್ನ ಚಟುವಟಿಕೆಗಳ ಪ್ರಮಾಣವನ್ನು ಹೆಚ್ಚಿಸಿಕೊಂಡಿತ್ತು. ಕಳೆದ ತಿಂಗಳು ಟಿಟಿಪಿ ಪಾಕಿಸ್ತಾನದೊಂದಿಗೆ ಅಧಿಕೃತವಾಗಿ ಕದನ ವಿರಾಮ ಒಪ್ಪಂದವನ್ನು ಹಿಂಪಡೆದಿತ್ತು, ಇದನ್ನು ಜೂನ್ ತಿಂಗಳಲ್ಲಿ ಘೋಷಿಸಲಾಗಿತ್ತು. ಬಲೂಚಿಸ್ಥಾನ ಹಾಗೂ ಖೈಬರ್ ಪಖ್ತುಂಕ್ವಾದಲ್ಲಿ ಟಿಟಿಪಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ದಾಳಿ ನಡೆಸಿತ್ತು. ಇತ್ತೀಚೆಗೆ ಅಮೇರಿಕ ಅಲ್-ಖೈದಾ ಹಾಗೂ ಟಿಟಿಪಿಯ ನಾಲ್ವರು ಭಯೋತ್ಪಾದಕರನ್ನು ಜಾಗತಿಕ ಭಯೋತ್ಪಾದಕರು ಎಂದು ಘೋಷಿಸಿತ್ತು.