ಮಡಿಕೇರಿ, ಡಿ. ೯: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ ಅವರು ತಾ.೧೪ ಮತ್ತು ೧೫ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ತಾ. ೧೪ ರಂದು ಬೆಳಗ್ಗೆ ೧೧ ಗಂಟೆಗೆ ಕಾನೂರು ಮಹಿಳಾ ಮಂಡಳಿ ಇವರ ಸಹಯೋಗದಲ್ಲಿ ಕಾನೂರು ಗ್ರಾಮದಲ್ಲಿ ನಡೆಯುವ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ ೪ ಗಂಟೆಗೆ ಗಡಿ ಪ್ರಾಧಿಕಾರದ ಅನುದಾನದ ಅಡಿಯಲ್ಲಿ ನಿರ್ಮಿತವಾದ ಶಾಲಾ, ಕಾಲೇಜು, ಸಂಘ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ ಹಾಗೂ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ.

ತಾ.೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿ ಗಡಿ ಭಾಗದ ಶಾಲೆಗಳು/ ಸಂಘ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ತಿಳಿಸಿದ್ದಾರೆ.