ಸೋಮವಾರಪೇಟೆ, ಡಿ. ೧೦: ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್.ನೌಕರರ ಸಂಘದ ವತಿಯಿಂದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ತಾ. ೧೨ರಂದು (ನಾಳೆ) ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಶಾಸಕರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ಅಧ್ಯಕ್ಷರಾದ ಬಿ.ಎಂ. ಸತೀಶ್ ತಿಳಿಸಿದ್ದಾರೆ.
ತಾ. ೧೯ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್ನಲ್ಲಿ ರಾಜ್ಯದಾದ್ಯಂತ ಲಕ್ಷಾಂತರ ನೌಕರರು ಮಾಡು ಇಲ್ಲವೇ ಮಡಿ ಹೋರಾಟ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ತಾ. ೧೨ರಂದು ಎನ್.ಪಿ.ಎಸ್.ನೌಕರರ ಸಂಘದ ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಬೆಳಿಗ್ಗೆ ೧೦ ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಆವರಣದಿಂದ ಮೆರವಣಿಗೆಯಲ್ಲಿ ಹೊರಟು ಶಾಸಕರ ಕಚೇರಿಗೆ ತೆರಳಿ ಮನವಿ ನೀಡಲಾಗುವುದು ಎಂದು ತಿಳಿಸಿದ್ದಾರೆ.