ಸಿದ್ದಾಪುರ, ಡಿ. ೧೦ : ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಮುಖಂಡರಾದ ಪದ್ಮಿನಿ ಶ್ರೀಧರ್ ರವರು ಇತ್ತೀಚೆಗೆ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಸರ್ಕಾರವು ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯು ರಾಜ್ಯ ವ್ಯಾಪ್ತಿಯಲ್ಲಿ ಪ್ರತಿಭಟನಾ ಆಂದೋಲನವನ್ನು ಕೈಗೊಂಡಿದೆ ಎಂದರು.
ಪ್ರತಿಭಟನೆಯಲ್ಲಿ ಸಿಪಿಐ (ಎಂ) ಮುಖಂಡ ಪಿ.ಆರ್ ಭರತ್, ಜನವಾದಿ ಮಹಿಳಾ ಸಂಘಟನೆಯ ಪದಾಧಿಕಾರಿಗಳಾದ ಕವಿತ, ಸೆಫಿಯಾ, ವಾಣಿ, ಇನ್ನಿತರರು ಹಾಜರಿದ್ದರು.