ಮಡಿಕೇರಿ, ಡಿ. ೯: ಕೊಡಗು ಜಿಲ್ಲಾ ಸಿರಿಗನ್ನಡ ವೇದಿಕೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಉಳುವಂಗಡ ಕಾವೇರಿ ಉದಯ ನೇಮಕಗೊಂಡಿದ್ದಾರೆ.

ವೇದಿಕೆಯ ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ್ ನಂಜಪ್ಪ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಮಡಿಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಈರಮಂಡ ಹರಿಣಿ ವಿಜಯ್, ಪೊನ್ನಂಪೇಟೆ ತಾಲೂಕು ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಪೊನ್ನಂಪೇಟೆ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಲ್ಲಮಡ ಶ್ಯಾಮಲ ಸುನಿಲ್, ಕಾರ್ಯದರ್ಶಿಯಾಗಿ ಮುಕ್ಕಾಟಿರ ಮೌನಿ ನಾಣಯ್ಯ ನೇಮಕಗೊಂಡಿದ್ದಾರೆ.