ಸೋಮವಾರಪೇಟೆ, ಡಿ. ೯: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ನಡೆಯಿತು.
ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು ಅವರ ನೇತೃತ್ವದಲ್ಲಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭ ಕಾಂಗ್ರೆಸ್ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಬಿ.ಇ. ಜಯೇಂದ್ರ, ನಗರ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಮಹಮ್ಮದ್ ಶಫಿ, ಗೌರವಾಧ್ಯಕ್ಷ ಎಂ. ಜಮೀರ್, ಮುಖಂಡರುಗಳಾದ ಹೆಚ್.ಸಿ. ನಾಗೇಶ್, ಬಿ.ಜಿ. ಇಂದ್ರೇಶ್, ಸುಜಿತ್, ಗುರುಲಿಂಗಪ್ಪ, ಜೇಕಬ್ ಸೈಮನ್, ಅಜಯ್, ಅಬೂಬಕರ್, ರಜಾಕ್, ಮಹಿಳಾ ಕಾಂಗ್ರೆಸ್ನ ಗೌರಮ್ಮ, ಮಂಜುಳಾ ಸೇರಿದಂತೆ ಇತರರು ಉಪಸ್ಥಿತರಿದ್ದರು.