ಮಡಿಕೇರಿ, ಡಿ. ೯: ಪ್ರಸಕ್ತ (೨೦೨೨-೨೩) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ.೧೯ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅರ್ಜಿಯನ್ನು ವೆಬ್ಸೈಟ್ ವಿಳಾಸ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-೧, ಎಸ್ಸಿ ಮತ್ತು ಎಸ್ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ ರೂ. ೧ ಲಕ್ಷ ಆಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ ತಾಲೂಕು ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ೯೮೪೪೫೩೧೦೪೦ ಹಾಗೂ ಸೋಮವಾರಪೇಟೆ ತಾಲೂಕು ೯೪೮೧೭೭೨೧೪೩ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.