ಮಡಿಕೇರಿ, ಡಿ. ೯: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಮತ್ತು ವಕೀಲರ ಸಂಘದ ವತಿಯಿಂದ ‘ಮಾನವ ಹಕ್ಕುಗಳ ದಿನಾಚರಣೆಯು ತಾ. ೧೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃAಗೇಶ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಸಿ.ಎನ್.ಮುನಿರತ್ನಮ್ಮ, ಜಿ.ಪಂ. ಸಿಇಓ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ವಕೀಲರ ಸಂಘದ ಉಪಾಧ್ಯಕ್ಷರಾದ ಕೆ.ಎಸ್.ತಮ್ಮಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.