ವೀರಾಜಪೇಟೆ, ಡಿ. ೯: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ತಾಲೂಕು ಮಟ್ಟದ ಚುನಾವಣಾ ಸಾಕ್ಷರತಾ ಕ್ಲಬ್ ಸ್ಪರ್ಧಾ ಕಾರ್ಯಕ್ರಮವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ವೀರಾಜಪೇಟೆಯ ಪಂಜರಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಸಂಪನ್ಮೂಲ ಅಧಿಕಾರಿಗಳಾದ ಓಮನ ಮತ್ತು ಗೀತಾಂಜಲಿ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ವೆಂಕಟೇಶ್ ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್ ಹಾಜರಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಷಡಾಕ್ಷರಿ ಹೆಚ್.ಆರ್. ಶಿವಪ್ರಸನ್ನ ಕೆ.ಎಲ್., ಭವ್ಯ ಕೆ.ಎನ್. ಉಪಸ್ಥಿತರಿದ್ದರು.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಏಳು ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲಾ ವಿದ್ಯಾರ್ಥಿಗಳು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.