ಮೂರ್ನಾಡು, ಡಿ ೯: ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ೨೦೨೧-೨೦೨೨ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಪಿ.ಕೆ. ಅಬೂಬಕ್ಕರ್ ಅವರ ಅಧ್ಯಕ್ಷತೆಯಲ್ಲಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ನೆರವೇರಿತು.
ಸಂಘದ ನಿರ್ದೇಶಕ ರಶಿಕ ಉತ್ತಪ್ಪ ಅವರು ಸ್ವಾಗತ ಭಾಷಣ ನೆರವೇರಿಸಿದರು. ಮುಖ್ಯ ಅತಿಥಿ ಗಳಿಂದ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದ ನಂತರ ಸಂಘದ ಮರಣ ಹೊಂದಿದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಸಂಘಕ್ಕೆ ಸೇವೆ ಸಲ್ಲಿಸಿದ ಕೆಲವು ಸದಸ್ಯರುಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳು ಹಾಗೂ ಸಂಘದ ಅಧ್ಯಕ್ಷರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಭೆಯ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಚಂದ್ರಶೇಖರ್, ಕೆ.ಟಿ.ಡಿ.ಓ. ಕೊಡಗು ಜಿಲ್ಲಾ ಮಾಜಿ ಗೌರವಾಧ್ಯಕ್ಷ ಎಂ.ಎ. ಮಹಮ್ಮದ್ ರಫೀಕ್, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯ ಮೂಡೆರ ಅಶೋಕ್ ಅಯ್ಯಪ್ಪ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ವಿಜಯ ಕುಮಾರ್, ಸಂಘದ ಉಪಾಧ್ಯಕ್ಷ ವಿನೋದ್ ಆರ್., ಕಾರ್ಯದರ್ಶಿ ಶಶಿಧರ ಎನ್.ಕೆ., ಸಹ ಕಾರ್ಯದರ್ಶಿ ಥೋಮಸ್, ಖಜಾಂಚಿ ರಿಯಾಜ್ ಅಹಮದ್ ಉಪಸ್ಥಿತರಿದ್ದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ನಾಗರಾಜ್ ಪ್ರಾರ್ಥಿಸಿ, ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಸಂಘದ ನಿರ್ದೇಶಕ ಖಾದರ್ ನೆರವೇರಿಸಿದರು.