ಕುಶಾಲನಗರ, ಡಿ. ೯: ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ನಡೆದ ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಹೆಸರಿನಲ್ಲಿ ಹಣ ದುರ್ಬಳಕೆ ಬಗ್ಗೆ ‘ಶಕಿ’್ತಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಪರ ವಿರೋಧ ಹೇಳಿಕೆ ಕೇಳಿ ಬರತೊಡಗಿದೆ.

ಸಣ್ಣ ನೀರಾವರಿ ಇಲಾಖೆಗೆ ಸಂಬAಧಿಸಿದ ನಾಲೆಯ ಹೂಳೆತ್ತುವ ಕಾಮಗಾರಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್ ತಿಳಿಸಿದ್ದಾರೆ. ಅವರು, ‘ಶಕ್ತಿ’ಯೊಂದಿಗೆ ಸಂಪರ್ಕಿಸಿ ಕಾಮಗಾರಿ ಬಗ್ಗೆ ಅಂದಾಜು ಪಟ್ಟಿ ಸಿದ್ಧಪಡಿಸಿ ಕಾಮಗಾರಿ ಕೈಗೊಳ್ಳಲಾಗಿದೆ. ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ನಾಲೆ ತಮ್ಮ ಸುರ್ಪದಿಗೆ ಸೇರಿದ್ದು, ಕೆಲಸ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ನಾಲೆಯಿಂದ ಹೂಳೆತ್ತಿದ್ದ ಮಣ್ಣನ್ನು ಸ್ಥಳೀಯ ರೈತರು ಒಯ್ದಿದ್ದು, ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಕೂಡಿಗೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆಯಿಷ, ಕಕ್ಕೆಹೊಳೆ ನಾಲೆ ಕಸ ವಿಲೇವಾರಿ ಕಾಮಗಾರಿ ಕಳೆದ ಕೆಲವು ಸಮಯದಿಂದ ನಡೆಯುತ್ತಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ, ೮ ಲಕ್ಷ ವೆಚ್ಚದ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈಗಾಗಲೇ ೧.೭೯ ಲಕ್ಷ ರೂ. ನಗದು ಹಣ ಪಾವತಿಯಾಗಿದೆ. ಕಾಮಗಾರಿ ಸಂದರ್ಭ ನಡೆದಿದೆ ಎನ್ನಲಾದ ದುರುಪಯೋಗದ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಯಲ್ಲಿ ಹಿಟಾಚಿ ಯಂತ್ರ ಬಳಸಿ ಕೆಲಸ ನಿರ್ವಹಿಸಿರುವುದು ಮತ್ತು ಯೋಜನೆಯ ದುರುಪಯೋಗ ನಡೆದಿದ್ದಲ್ಲಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳ ಪ್ರಕಾಶ್ ಮತ್ತು ಉಪಾಧ್ಯಕ್ಷೆ ಮೋಹಿನಿ ‘ಶಕ್ತಿ’ಮೂಲಕ ಒತ್ತಾಯಿಸಿದ್ದಾರೆ.