ಮಡಿಕೇರಿ, ಡಿ. ೯: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ವಾರ್ಷಿಕ ಕಾರ್ಯಕ್ರಮದನ್ವಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸಹಕಾರದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾಮಟ್ಟದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಈ ಸ್ಪರ್ಧೆಯನ್ನು ಏರ್ಪಡಿಸಿ ಮೊದಲ ಮೂರು ವಿಜೇತರಿಗೆ ಜಿಲ್ಲಾಮಟ್ಟದಲ್ಲಿ ಬಹುಮಾನ ವಿತರಿಸಿ ವಿಜೇತರಾದವರ ಉತ್ತರ ಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿ ಮೌಲ್ಯಮಾಪನ ಮಾಡಿ ಅಲ್ಲಿ ವಿಜೇತರಾದವರಿಗೆ ಮೂರು ಬಹುಮಾನಗಳನ್ನು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು.
ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ತಾ. ೧೬ ರ ಶುಕ್ರವಾರದಂದು ಪೂರ್ವಾಹ್ನ ೧೦.೩೦ ರಿಂದ ೧೧.೩೦ ಗಂಟೆಯವರೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಸಭಾಂಗಣ, ಪೆನ್ಶನ್ ಲೇನ್, ಮಡಿಕೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾಸಂಸ್ಥೆಯಿAದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆಮಾಡಿ ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಕೊಡಗು ಜಿಲ್ಲಾ ಸಹಕಾರ ಯೂನಿಯನ್ಗೆ ಕಳುಹಿಸಿಕೊಡಬೇಕೆಂದು ಕೋರಲಾಗಿದೆ.
ಭಾಗವಹಿಸುವ ವಿದ್ಯಾರ್ಥಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುವುದು ಮೊದಲ ಮೂರು ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಹಾಗೂ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧಾಳುಗಳು ಆಂಗ್ಲ ಅಥವಾ ಕನ್ನಡ ಭಾಷೆಯಲ್ಲಿ ಮಾತ್ರ ಬರೆಯಲು ಅವಕಾಶವಿದೆ. ಪ್ರಬಂಧ ಬರೆಯಲು ಬೇಕಾಗುವ ಉತ್ತರ ಪತ್ರಿಕೆಯನ್ನು ಆ ದಿವಸ ಸ್ಪರ್ಧಾ ಭವನದಲ್ಲಿ ಕೊಡಲಾಗುವುದು. ಪ್ರಬಂಧವನ್ನು ನಾಲ್ಕು ಪುಟಗಳಿಗೆ ಕಡಿಮೆ ಇಲ್ಲದಂತೆ ಆರು ಪುಟಗಳಿಗೆ ಮೀರದಂತೆ ಬರೆಯಬೇಕು. ಪ್ರಬಂಧ ಸ್ಪರ್ಧೆಗೆ ವಿಷಯ ‘ಸಹಕಾರ ಸಂಸ್ಥೆಗಳಲ್ಲಿ ಸಂಪೂರ್ಣ ಡಿಜಿಟಲೀಕರಣದ ಮೂಲಕ ವ್ಯವಹಾರ’ ‘ಈuಟಟಥಿ ಆigiಣಚಿಟiseಜ busiಟಿess iಟಿ
ಅo-oಠಿeಡಿಚಿಣives’.