ಕುಶಾಲನಗರ, ಡಿ. ೧೦: ಕುಶಾಲನಗರದ ವಾಸವಿ ಯುವಜನ ಸಂಘದ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.
ಕನ್ನಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಯುವ ಬ್ರಿಗೇಡ್ ಮಾರ್ಗದರ್ಶಕ ರಾದ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡು ಮಾತನಾಡಿದರು. ಕುಟುಂಬದ ಶಕ್ತಿ ಕ್ಷೀಣಗೊಂಡಲ್ಲಿ ರಾಷ್ಟçದ ಅಭಿವೃದ್ಧಿಗೆ ವ್ಯತಿರಿಕ್ತ ಪರಿಣಾಮ ಬೀರುವ ಮೂಲಕ ಮಾರಕವಾಗುವ ಆತಂಕ ವ್ಯಕ್ತಪಡಿಸಿದರು. ವಾಸವಿ ಯುವಜನ ಸಂಘದ ಅಧ್ಯಕ್ಷ ಪ್ರವೀಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಎಲ್. ಉದಯಕುಮಾರ್, ಕರ್ನಾಟಕ ಆರ್ಯವೈಶ್ಯ ಮಹಾ ಸಭಾದ ನಿರ್ದೇಶಕ ಬಿ.ಆರ್. ನಾಗೇಂದ್ರ ಪ್ರಸಾದ್, ಕರ್ನಾಟಕ ಆರ್ಯವೈಶ್ಯ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಪಟ್ಟಣ ಪಂಚಾಯಿತಿ ಸದಸ್ಯ ಅಮೃತ್ ರಾಜ್, ಆರ್ಯವೈಶ್ಯ ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷಿö್ಮ ಶ್ರೀನಿವಾಸ್, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಪ್ರತಿಮಾ ರಾಘವೇಂದ್ರ, ಸಂಘದ ನಿರ್ದೇಶಕರಾದ ವೈಶಾಕ್, ಬಾಲಾಜಿ, ಮತ್ತಿತರರು ಇದ್ದರು.