ಮಡಿಕೇರಿ, ಡಿ. ೯: ಮಡಿಕೇರಿಯ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪುತ್ತೂರಿನ ವಿವೇಕಾನಂದ ಎಂಜಿನಿಯರಿAಗ್ ಕಾಲೇಜಿನ ಬೋಧಕರು, ಪ್ರಯೋಗಾಲಯದ ಸಿಬ್ಬಂದಿಗಳು ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಡಾ|| ಚೇತನ್ ಅವರ ಮಾರ್ಗದರ್ಶನದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್ ಆಫ್ ಥಿಂಗ್ಸ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.