ಚೆಯ್ಯಂಡಾಣೆ: ಕಕ್ಕಬೆಯ ಸಮಾಜ ಕಲ್ಯಾಣ ಇಲಾಖೆಯ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೬ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಸುಮಯ್ಯ ಕೆ.ಎಂ., ಸಹ ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು.ಚೆಯ್ಯಂಡಾಣೆ: ಕಕ್ಕಬೆಯ ಸಮಾಜ ಕಲ್ಯಾಣ ಇಲಾಖೆಯ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೬ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಸುಮಯ್ಯ ಕೆ.ಎಂ., ಸಹ ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು.ಸೋಮವಾರಪೇಟೆ: ಕಾಂಗ್ರೆಸ್ ಎಸ್.ಸಿ. ಘಟಕ ಹಾಗೂ ನಗರ ಕಾಂಗ್ರೆಸ್ನಿAದ ಸೋಮವಾರಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಕಾಂಗ್ರೆಸ್ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಬಿ.ಇ. ಜಯೇಂದ್ರ ಅವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಹೆಚ್.ಎ. ನಾಗರಾಜು, ಪದಾಧಿಕಾರಿಗಳಾದ ಮಹಮ್ಮದ್ ಶಫಿ, ರಾಜಪ್ಪ, ಸುಜಿತ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಕೊಡ್ಲಿಪೇಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಕೊಡ್ಲಿಪೇಟೆ ಸಮೀಪದ ದೊಡ್ಡಕುಂದ ಸರ್ಕಲ್ನಲ್ಲಿ ಆಚರಿಸಲಾಯಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪ್ರಮುಖರು ಪುಷ್ಪನಮನ ಸಲ್ಲಿಸಿ, ಸಂವಿಧಾನ ಶಿಲ್ಪಿಯ ಜೀವನ ಚರಿತ್ರೆಯ ಬಗ್ಗೆ ಮಾತನಾಡಿದರು. ಮೊಂಬತ್ತಿಗಳನ್ನು ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭ ದಲಿತ ಸಂಘಟನೆಯ ಮುಖಂಡ ವೇದ್ ಕುಮಾರ್, ದೇವಾಲಯ ಸಮಿತಿ ಅಧ್ಯಕ್ಷ ಜವರೇಗೌಡ, ಲಿಂಗರಾಜು, ಗ್ರಾ.ಪಂ. ಸದಸ್ಯೆ ಪಾವನ ಸೇರಿದಂತೆ ದೊಡ್ಡಕುಂದ, ರಾಮೇನಹಳ್ಳಿ, ಕಿರಿಕೊಡ್ಲಿ ಗ್ರಾಮದ ಪ್ರಮುಖರು ಭಾಗವಹಿಸಿದ್ದರು.