ಕುಶಾಲನಗರ, ಡಿ.೧೦ : ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಹೆಸರಿನಲ್ಲಿ ಹಣ ದುರ್ಬಳಕೆ ಬಗ್ಗೆ ‘ಶಕಿ’್ತಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಪ್ರಕಾಶ್ ಮತ್ತು ಸ್ಥಳೀಯ ವಾರ್ಡ್ ಸದಸ್ಯೆ ಜಯಶೀಲ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಸಣ್ಣ ನೀರಾವರಿ ಇಲಾಖೆ ಅಡಿಯಲ್ಲಿ ಬರುವ ಭುವನಗಿರಿ ನಾಲೆಯ ನಿರ್ವಹಣೆ ಕಾಮಗಾರಿಯನ್ನು ಪಂಚಾಯಿತಿ ಅನುದಾನದಲ್ಲಿ ನಿಯಮಬಾಹಿರವಾಗಿ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರ ಆರೋಪದ ಹಿನ್ನೆಲೆಯಲ್ಲಿ ತಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ಅಧ್ಯಕ್ಷೆ ಮಂಗಳ ಪ್ರಕಾಶ್ ‘ಶಕಿ’್ತಯೊಂದಿಗೆ ತಿಳಿಸಿದ್ದಾರೆ.
ಸಣ್ಣ ನೀರಾವರಿ ಇಲಾಖೆಗೆ ಸೇರಿದ ಭುವನಗಿರಿ ನಾಲೆ ಕಾಮಗಾರಿ ನಡೆಯುತ್ತಿರುವುದು ತಮ್ಮ ಗಮನಕ್ಕೆ ಬಂದಿಲ್ಲ ಎಂದು ಮಂಗಳ ಪ್ರಕಾಶ್ ಸ್ಪಷ್ಟಪಡಿಸಿದ್ದು, ತಮ್ಮ ಗಮನಕ್ಕೆ ಸ್ಥಳೀಯ ಸದಸ್ಯೆ ಜಯಶೀಲ ತಿಳಿಸಿದ ನಂತರ ಕಾಮಗಾರಿಯನ್ನು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸ್ಥಗಿತಗೊಳಿಸಲು ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭ ಮಾತನಾಡಿದ ಸ್ಥಳೀಯ ರೈತ ಸಂಘದ ಅಧ್ಯಕ್ಷರಾದ ಅಪ್ಪಾಜಿ, ಜೇನುಕಲ್ಲು ಬೆಟ್ಟ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಕೃಷಿಕರಾದ ನಾಗೇಶ್, ಚಂದ್ರೇಗೌಡ, ಮಂಜುನಾಥ್, ಧರ್ಮದಾಸ್ ಮತ್ತಿತರರು ಪಂಚಾಯಿತಿ ಮೂಲಕ ಗ್ರಾಮಕ್ಕೆ ಅವಶ್ಯವಿರುವ ರಸ್ತೆ ಮತ್ತಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬದಲು ಸಂಬAಧ ಪಡದ ಕಾಮಗಾರಿ ನಡೆಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.