ಕರಿಕೆ,ಡಿ.೧೦: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ನಮ್ಮ ಸರಕಾರವು ಕೊರೊನಾ ಹಾಗೂ ಪ್ರಾಕೃತಿಕ ವಿಕೋಪದ ಸಂಕಷ್ಟದ ನಡುವೆಯೂ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಭಾಗಮಂಡಲ- ಕರಿಕೆ ಅಂತರ್ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಸಂಚಾರಕ್ಕೆ ಅಡಚಣೆ ಯಾಗಿತ್ತು,ರಸ್ತೆ ಬದಿಯ ಮರಗಿಡಗಳಿಂದ ರಸ್ತೆಗೆ ಹಾನಿಯಾಗುತ್ತಿದ್ದು, ಅರಣ್ಯ ಇಲಾಖೆ ರಸ್ತೆ ಬದಿ ಕೊಂಬೆ ತೆರವುಗೊಳಿಸಲು ಸಹಕರಿಸಬೇಕೆಂದರಲ್ಲದೆ ಪಟ್ಟಿ ತೊಡಿಕಾನ ರಸ್ತೆ ಅಭಿವೃದ್ಧಿಗೆ ಹತ್ತು ಲಕ್ಷ ಬಿಡುಗಡೆ ಮಾಡಲಾಗಿದ್ದು ಸಂಬAಧಿಸಿದ ಜಿ.ಪಂ. ಇಂಜಿನಿಯರ್ ಅರಣ್ಯ ಇಲಾಖೆಯ ಅನುಮತಿ ಕೋರಿ ಪತ್ರ ಬರೆಯುವಂತೆ ತಿಳಿಸಿದರು. ಇದೀಗ ಸುಮಾರು ಮೂರುವರೆ ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ ಎಂದರು.
ಶಾಸಕರು ಲೋಕೋಪಯೋಗಿ ಹಾಗೂ ಜಿ.ಪಂ ಇಂಜಿನಿಯರಿAಗ್ ವಿಭಾಗದ ಸುಮಾರು ಎಂಟುವರೆ ಕೋಟಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಕಲ್ಪನಾ ಜಗದೀಶ್, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಭಾಗಮಂಡಲ ವಲಯ ಅರಣ್ಯ ಅಧಿಕಾರಿ ರವೀಂದ್ರ, ಗ್ರಾ.ಪಂ. ಸದಸ್ಯೆ ದೀಪಿಕಾ, ಭಾಜಪ ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ಕಾರ್ಯದರ್ಶಿ ಕೋಡಿರ ಪ್ರಸನ್ನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣಪತಿ ಪಿ.ಪಿ, ಭಾಜಪ ಶಕ್ತಿ ಕೇಂದ್ರದ ಅಧ್ಯಕ್ಷ ಚಂಗಪ್ಪ, ಪ್ರಮುಖರಾದ ಸುಬ್ರಮಣ್ಯ ಉಪಾಧ್ಯಾಯ, ಹರೀಶ್ ಹೊಸಮನೆ, ಕವಿತಾ, ರಾಜೀವ್ ಪಿ.ಎಂ. ಸೇರಿದಂತೆ ಇತರೆ ಪ್ರಮುಖರು, ಗ್ರಾಮಸ್ಥರು ಹಾಜರಿದ್ದರು.