ಮಡಿಕೇರಿ, ಡಿ. 12: ಕೊಡಗು ಜಿಲ್ಲಾಡಳಿತ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲೆಯ ಕುಶಾಲನಗರ, ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಬೃಹತ್ ಉದ್ಯೋಗ ಮೇಳ ಜರುಗಲಿದ್ದು, ಅರ್ಹರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಕೋರಿದ್ದಾರೆ.
ಉದ್ಯೋಗ ಮೇಳ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ತಾ.13 ರಂದು (ಇಂದು) ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ತಾ. 16 ರಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಾಗೂ ತಾ. 20 ರಂದು ಗೋಣಿಕೊಪ್ಪ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯಾಯ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಯ ಎಲ್ಲಾ ವಿದ್ಯಾವಂತ ನಿರುದ್ಯೋಗಿಗಳು ಇದರಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬಹುದು. ಬಹಳಷ್ಟು ಪ್ರತಿಷ್ಠಿತ ಕಂಪನಿಗಳು ಇದರಲ್ಲಿ ಭಾಗಿಯಾಗಲಿವೆ.
10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 300 ಕ್ಕಿಂತ ಹೆಚ್ಚು ಉದ್ಯೋಗಗಳಿಗೆ ನೇಮಕಾತಿ ನಡೆಯಲಿದೆ.
ಜಸ್ಟ್ ಡಯಲ್, ಪ್ರೇರಣಾ ಮೋಟಾರ್ಸ್ ಪ್ರೈ.ಲಿ., ಟ್ರಿಟೆಂಟ್ ಅಟೋ ಮೊಬೈಲ್ ಪ್ರೈ ಲಿ., ನೆಟ್ಟೂರು ಟೆಕ್ನಿಕಲ್ ಟ್ರೈನಿಂಗ್ ಫೌಂಡೇಶನ್, ಮದರ್ಸನ್ ಬೆಂಗಳೂರು, ಹೊಂಡಾ ಸನ್ ಬ್ರೈಟ್, ದಿ ನುಡ್ಗೆ ಫೌಂಡೇಶನ್, ಅಮನ್ವನ ರೆಸಾರ್ಟ್, ವೀರ ಭೂಮಿ ರೆಸಾರ್ಟ್, ಪೂಜ್ಯಿಟೆಕ್ ಪ್ರೈ.ಲಿ. ಮತ್ತು ಸ್ವರ್ಣ ಭೂಮಿ ರೆಸಾರ್ಟ್ ಮೊದಲಾದ 30 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಉದ್ಯೋಗಾಕಾಂಕ್ಷಿಗಳು hಣಣಠಿs://ಜಿoಡಿms.gಟe/ಇಡಿಛಿWUಟಿಉಥಿಠಿs4Svಎಖಡಿ7 ಗೂಗಲ್ ಲಿಂಕ್/ಅಥವಾ ಕೋಡ್ ಮೂಲಕ ನೋಂದಾಯಿಸಿಕೊಂಡು ತಮ್ಮ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ವೈಯಕ್ತಿಕ ವಿವರಗಳ(ಬಯೋ ಡಾಟಾ) ಕನಿಷ್ಟ 10 ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು. ಅಲ್ಲದೇ ಉದ್ಯೋಗ ಮೇಳ ನಡೆಯುವ ಕೇಂದ್ರದಲ್ಲಿಯೂ ಅಭ್ಯರ್ಥಿಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗದಾತರು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರಗಳನ್ನು ಈ ಕಚೇರಿಯ ಇ-ಮೇಲ್ ವಿಳಾಸಕ್ಕೆ ಜsಜoಞoಜಚಿgu2020@gmಚಿiಟ.ಛಿom ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಡಗು ಜಿಲ್ಲೆ, ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ.ಸಂ.08272-225851/ 9738361502/ 8123312319/ 8296020826 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ಅವರು ತಿಳಿಸಿದ್ದಾರೆ.