ವೀರಾಜಪೇಟೆ, ಡಿ. ೧೧: ಆರ್ಜಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಸಭಾಂಗಣದಲ್ಲಿ ತಾ. ೨೧ ರಂದು ನಡೆಯಲಿರುವ ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬAಧಿಸಿದAತೆ ಆರ್ಜಿ ಗ್ರಾಮದ ವಿಎಸ್‌ಎಸ್‌ಎನ್‌ಎಲ್ ಸಭಾಂಗಣ ದಲ್ಲಿ ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ ಮಾತನಾಡಿ, ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಆಚರಿಸುವ ಕುರಿತು ಎಲ್ಲರೂ ಕೈ ಜೋಡಿಸಬೇಕು. ತಾಲೂಕು ಸಮ್ಮೇಳದ ಯಶಸ್ಸಿಗೆ ಎಲ್ಲಾ ಸಮಾಜದ ಮುಖಂಡರು ಹಾಗೂ ಕನ್ನಡಪರ ಸಂಘಟನೆಗಳು ಮುಂದೆ ಬರಬೇಕು. ಆರೋಗ್ಯ, ಸಾಂಸ್ಕöÈತಿಕ, ಆಹಾರ, ಸ್ಮರಣ ಸಂಚಿಕೆ ಸೇರಿದಂತೆ ೮ ಸಮಿತಿ ರಚಿಸಲಾಗಿದ್ದು, ಪ್ರತಿ ಸಮಿತಿಗೆ ಮುಖ್ಯಸ್ಥರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಹೆಸರಾಂತ ಸಾಹಿತಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಹಿತ್ಯ ಪರಿಷತ್‌ನ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಕನ್ನಡ ಪರ ಸಂಘಟನೆಗಳು, ಸಾರ್ವಜನಿಕರು ಶ್ರಮಿಸಬೇಕೆಂದು ಮನವಿ ಮಾಡಿದರು.

ಆರ್ಜಿ ಮತ್ತು ಬೇಟೋಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಮಣಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಎಲೆಮರೆಯ ಕಾಯಿಯಂತೆ ಇರುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಕೆಲಸವಾಗಬೇಕು. ಕನ್ನಡ ಸಾಹಿತ್ಯ ಸಮ್ಮೇಳನಗಳು ನಗರ ಪ್ರದೇಶಗಳಿಗೆ ಸೀಮಿತವಾಗದೆ ಗ್ರಾಮೀಣ ಮಟ್ಟದಲ್ಲಿಯೂ ಕನ್ನಡದ ಕಂಪು ಪಸರಿಸಬೇಕು ಎನ್ನುವ ಉದ್ದೇಶದಿಂದ ನಮ್ಮ ಗ್ರಾಮದಲ್ಲಿ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಎಲ್ಲರೂ ಈ ನಿಟ್ಟಿನಲ್ಲಿ ಕನ್ನಡಮ್ಮನ ಸೇವೆಗೆ ತಮ್ಮ ಸಮಯವನ್ನು ಮೀಸಲಿರಿಸಿ ನಾಡು ನುಡಿಯ ರಕ್ಷಣೆಗೆ ಕಟಿಬದ್ದರಾಗಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಿಲ್ಲಾ ಉಪ ನಿರ್ದೆಶಕ ಪಿ.ಎಸ್. ಮಚ್ಚಾಡೋ ಮಾತನಾಡಿ, ಸಮ್ಮೇಳನದ ಅಂಗವಾಗಿ ರಚಿಸಲಾಗಿರುವ ಎಲ್ಲಾ ಉಪಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದರು.

ಇದೇ ಸಂದರ್ಭ ಸ್ವಾಗತ ಸಮಿತಿ ಸೇರಿದಂತೆ ಇತರ ೮ ಸಮಿತಿಗಳನ್ನು ಆರ್ಜಿ, ಬೇಟೋಳಿ ಗ್ರಾಮದ ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ರಚಿಸಲಾಯಿತು. ಗ್ರಾಮದ ವಿವಿಧ ಶಾಲೆಗಳಿಂದ ಒಂದೊAದು ಸಾಂಸ್ಕೃತಿಕ ತಂಡ ಹಾಗೂ ಶಾಲೆ ಸೇರಿದಂತೆ ಎರಡು ಗ್ರಾಮ ಪಂಚಾಯಿತಿಯಿAದ ಸ್ತಬ್ಧಚಿತ್ರ ಮೆರವಣಿಗೆಗೆ ಸಿದ್ಧತೆ ಮಾಡಿ ಕೊಳ್ಳುವಂತೆ ತೀರ್ಮಾನಿಸಲಾಯಿತು. ವೇದಿಕೆಯಲ್ಲಿ ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧ ಉಪಸ್ಥಿತರಿದ್ದು, ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ, ಸಾವಿತ್ರಿ, ಟೋಮಿ ಥೋಮಸ್, ಕೋಶಾಧಿಕಾರಿ ಶಬರೀಶ್ ಶೆಟ್ಟಿ, ಸಾಹಿತಿ ರಜಿತ ಕಾರ್ಯಪ್ಪ, ಆರ್ಜಿ ಮತ್ತು ಬೇಟೋಳಿ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಗ್ರಾಮದ ಪ್ರಮುಖರು ಅಧಿಕ ಸಂಖ್ಯೆಯಲ್ಲಿ ಹಾಜರಿದ್ದರು.