ಸಿದ್ದಾಪುರ, ಡಿ. 12 : ಎಂ.ಬಿ.ಎ ಪದವಿಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗಿನ ವಿದ್ಯಾರ್ಥಿ ಕರ್ನಾಟಕ ರಾಜ್ಯಕ್ಕೆ 6ನೇ ರ್ಯಾಂಕ್ ಗಳಿಸಿದ್ದಾರೆ. ಮೂಲತಃ ಸಿದ್ದಾಪುರದ ಕರಡಿಗೋಡು ಗ್ರಾಮದ ನಿವಾಸಿಯಾದ ಮೊಹಮ್ಮದ್ (ಕುಂಞಪು) ಹಾಗೂ ಫಾಮಿದ ದಂಪತಿಯ ಪುತ್ರನಾದ ನಿಯಾಸ್ ಎ.ಎಂ ಅಮೃತಾ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಸೈನ್ಸ್ ಕಾಲೇಜು ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ಫಲಿತಾಂಶದಲ್ಲಿ ಸಾಧನೆ ಮಾಡಿದ್ದಾರೆ.