ಸೋಮವಾರಪೇಟೆ, ಡಿ. 12: ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗೌಡಳ್ಳಿ ಗ್ರಾಮದಲ್ಲಿ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.

ಗೌಡಳ್ಳಿ ನವದುರ್ಗಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಕ.ಸಾ.ಪ. ಜಿಲ್ಲಾಧ್ಯಕ್ಷ ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

ಗೌಡಳ್ಳಿ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ, ಶಾಲೆಯ ಮುಖ್ಯಸ್ಥರು, ಸ್ಥಳೀಯ ಕನ್ನಡಾಭಿಮಾನಿಗಳ ಆಶಯದಂತೆ ಗೌಡಳ್ಳಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.

ತಾಲೂಕು ಘಟಕದ ಅಧ್ಯಕ್ಷ ಎಸ್.ಡಿ. ವಿಜೇತ್, ಜಿಲ್ಲಾ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಶನಿವಾರಸಂತೆ ಹೋಬಳಿ ಅಧ್ಯಕ್ಷ ನಾಗರಾಜ್ ಮತ್ತಿತರರು ಇದ್ದರು.