ಕೂಡಿಗೆ, ಡಿ. 12: ಶಿರಂಗಾಲ ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಅಧ್ಯಕ್ಷೆ ಕೆ.ಜೆ. ಗೀತಾ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ದೇವತೆಯಾದ ಮಂಟಿಗಮ್ಮ ದೇವಾಲಯದ ಉದ್ಘಾಟನೆ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಸ್ವಚ್ಛತೆ ಮತ್ತು ಬೀದಿ ದೀಪಗಳ ಅಳವಡಿಕೆಗೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಸೇರಿದಂತೆ ಚರ್ಚೆಗಳು ನಡೆದವು.
15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಬಗ್ಗೆ ಚರ್ಚೆಗಳು ನಡೆದು ಪೂರ್ಣಗೊಳಿಸಲು ಸಂಬಂಧಿಸಿದವರಿಗೆ ತಿಳಿಸುವ ಬಗ್ಗೆ ಚರ್ಚೆ ನಡೆಯಿತು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭ ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ, ಸದಸ್ಯರಾದ ಪ್ರದೀಪ್, ಶ್ರೀಕಾಂತ್, ಬಸವರಾಜ್, ಲತಾಬಾಯಿ, ಲಕ್ಷ್ಮಿ, ಸರಿತಾ, ಭಾಗೀರಥಿ, ಅಭಿವೃದ್ಧಿ ಅಧಿಕಾರಿ ಹೇಮಾಲತಾ, ಕಾರ್ಯದರ್ಶಿ ಕೆ.ಸಿ. ರವಿ ಹಾಜರಿದ್ದರು.