ಮಡಿಕೇರಿ, ಡಿ. 12: ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭವು ರಾಜ ಭವನದ ಗಾಜಿನ ಮನೆಯಲ್ಲಿ ನಡೆಯಿತು. ಉತ್ತಮ ರಾಜ್ಯ ರಾಷ್ಟ್ರ ಹಾಗೂ ಅಂತರರಾಷ್ಟ್ರಮಟ್ಟದ ಕ್ರೀಡಾ ಸಾಧನೆ, ಫೆÇೀಟೋಗ್ರಫಿ ಹಾಗೂ ವೀಡಿಯೋಗ್ರಫಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ, ಸ್ಫೋಟಕ ಪತ್ತೆ ಕರ್ತವ್ಯದಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ, ಶ್ವಾನ ದಳದ ವಿಭಾಗದಲ್ಲಿ 90ಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ವಿಶೇಷ ಸಾಧನೆ ಹಾಗೂ ಕರ್ತವ್ಯ ನಿಷ್ಠೆಯನ್ನು ಪರಿಗಣಿಸಿ ಮಡಿಕೇರಿಯ ಎಆರ್ಎಸ್ಐ ಕೆ.ಆರ್. ಜಿತೇಂದ್ರ ರೈ ಅವರಿಗೆ ಪೆÇಲೀಸ್ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ರಾಜ್ಯಪಾಲರು ಪಾಲ್ಗೊಂಡಿದ್ದರು.