ಮಡಿಕೇರಿ, ಡಿ. 12: ವೀರಾಜಪೇಟೆಯ ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಎಸ್.ಆರ್. ಉಷಾಲತ ತಮ್ಮ ತಂದೆ ದಿ. ಸೂದನ ಎ. ರಾಘವಯ್ಯ ಅವರ ಸ್ಮಾರಕಾರ್ಥ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ. 50 ಸಾವಿರದ ದತ್ತಿ ಸ್ಥಾಪಿಸಿದ್ದಾರೆ.

ಪ್ರತಿವರ್ಷಗಳಿಗೆ ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ದತ್ತಿ ಬಳಸಿಕೊಂಡು ಗೌರವಿಸಲಾಗುವುದು. ದಿ. ಸೂದನ ಎ. ರಾಘವಯ್ಯ ಅವರು ಮಡಿಕೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುವ ಇವರ ನೆನಪಿಗಾಗಿ ಈ ದತ್ತಿಯನ್ನು ಸ್ಥಾಪಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.