ಮಡಿಕೇರಿ, ಡಿ. ೧೪: ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳದಲ್ಲಿ ೬೪೮ ಮಂದಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹಾಗೂ ೩೨೮ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನೋಂದಣಿ ಯಾಗಿದ್ದು, ಈ ಪೈಕಿ ೧೩೭ ಮಂದಿ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ.

ತಾ. ೧೬ ರಂದು ಮಡಿಕೇರಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಾಗೂ ತಾ. ೨೦ ರಂದು ಗೋಣಿಕೊಪ್ಪ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ತಿಳಿಸಿದ್ದಾರೆ.