ಕೂಡಿಗೆ, ಡಿ. ೧೪: ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಕೂಡಿಗೆ ಕ್ರೀಡಾ ಶಾಲೆಯ ಕ್ರೀಡಾಂಗಣ ನಡೆಯಿತು. ಉದ್ಘಾಟನೆಯನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯ ನೆರವೇರಿಸಿದರು.

ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹೊಸ ಯೋಜನೆಯಾದ ಗ್ರಾಮೀಣ ಕ್ರೀಡಾಕೂಟ ಇದಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿರುವ ಯುವಕ-ಯುವತಿಯರ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಅದನ್ನು ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಬಡ್ಡಿ, ವಾಲಿಬಾಲ್, ಖೋ-ಖೋ ಪಂದ್ಯಗಳು ಎರಡು ದಿನಗಳ ಕಾಲ ನಡೆಯಲಿವೆ. ಈ ಸಂದರ್ಭ ಕ್ರೀಡಾ ಶಾಲೆಯ ಮುಖ್ಯೋಪಾಧ್ಯಾಯ ಬಿ.ಟಿ. ದೇವಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕರುಂಬಯ್ಯ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಉತ್ತಪ್ಪ, ಜಿಲ್ಲಾ ಕಬಡ್ಡಿ ತೀರ್ಪುಗಾರರ ಸಂಘದ ಅಧ್ಯಕ್ಷ ಎ.ಎಂ. ಆನಂದ್, ಕ್ರೀಡಾ ಶಾಲೆಯ ಅಥ್ಲೆಟಿಕ್ ತರಬೇತುದಾರ ಅಂತೋಣಿ ಡಿಸೋಜ, ಹಾಕಿ ತರಬೇತುದಾರ ವೆಂಕಟೇಶ್, ಮಂಜುನಾಥ, ಸುರೇಶ್, ದೀನಮಣಿ, ಬಿಂದು, ಮಹಾಬಲ, ಸುಬ್ಬಯ್ಯ ಸೇರಿದಂತೆ ಕ್ರೀಡಾಪಟುಗಳು ಹಾಜರಿದ್ದರು.