ಮಡಿಕೇರಿ, ಡಿ. ೧೩: ಕಾಲೇಜಿನ ಅಭಿವೃದ್ಧಿ ಜತೆಗೆ ಸಂಘದ ಕಾರ್ಯ ಚಟುವಟಿಕೆಗಳನ್ನು ಪರಿಣಾಮಕಾರಿ ಯಾಗಿ ನಡೆಸುವಂತೆ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ಸಲಹೆ ನೀಡಿದರು.
ವೀರಾಜಪೇಟೆಯ ಚಿಕ್ಕಪೇಟೆ ಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಕಾಲೇಜು ಸ್ಥಾಪನೆಗೊಂಡು ಹದಿನಾರು ವರ್ಷಗಳು ಕಳೆದಿವೆ. ಕಾಲೇಜಿನ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳು ಚಾಲ್ತಿಯಲ್ಲಿದೆ. ಮುಂದೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು, ಹಳೇ ವಿದ್ಯಾರ್ಥಿಗಳ ಸಂಘದ ಸಹಕಾರ ಅಗತ್ಯ ಎಂದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಸಂಚಾಲಕರಾದ ಡಾ. ಉಷಾ ಡಿ.ಕೆ. ಮಾತನಾಡಿ, ೨೦೦೭ ರಿಂದ ಇಲ್ಲಿಯ ತನಕ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ ಕಾಲೇಜಿನಿಂದ ಹೊರ ಹೋಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಲೇಜಿನಲ್ಲಿ ನಡೆಯುವ ಶೈಕ್ಷಣಿಕ ಕಾರ್ಯ ಚಟುವಟಿಕೆಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಕಾಲೇಜಿನ ನ್ಯಾಕ್ ಸಮಿತಿಯ ಸಂಯೋಜಕ ಹೆಚ್.ಎಸ್. ವೇಣುಗೋಪಾಲ್ ಮಾತನಾಡಿ, ಜನವರಿ ತಿಂಗಳಿನಲ್ಲಿ ಕಾಲೇಜಿಗೆ ನ್ಯಾಕ್ ತಂಡ ಆಗಮಿಸಲಿದ್ದು, ಈ ಸಂದರ್ಭ ಹಿರಿಯ ವಿದ್ಯಾರ್ಥಿಗಳು ಕೂಡ ಭಾಗವಹಿಸಬೇಕೆಂದು ಕೋರಿದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೋಪಣ್ಣ ಮಾತನಾಡಿ, ಈಗಾಗಲೇ ಸಂಘದಿAದ ಕಾಲೇಜಿಗೆ ಹಲವು ಕೊಡುಗೆಗಳನ್ನು ನೀಡಲಾಗಿದೆ.
ಕೋವಿಡ್ ಹಿನ್ನೆಲೆ ಸಂಘದ ಕಾರ್ಯ ಚಟುವಟಿಕೆಗಳನ್ನು ಸಂಯೋಜಕ ಹೆಚ್.ಎಸ್. ವೇಣುಗೋಪಾಲ್ ಮಾತನಾಡಿ, ಜನವರಿ ತಿಂಗಳಿನಲ್ಲಿ ಕಾಲೇಜಿಗೆ ನ್ಯಾಕ್ ತಂಡ ಆಗಮಿಸಲಿದ್ದು, ಈ ಸಂದರ್ಭ ಹಿರಿಯ ವಿದ್ಯಾರ್ಥಿಗಳು ಕೂಡ ಭಾಗವಹಿಸಬೇಕೆಂದು ಕೋರಿದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೋಪಣ್ಣ ಮಾತನಾಡಿ, ಈಗಾಗಲೇ ಸಂಘದಿAದ ಕಾಲೇಜಿಗೆ ಹಲವು ಕೊಡುಗೆಗಳನ್ನು ನೀಡಲಾಗಿದೆ.
ಕೋವಿಡ್ ಹಿನ್ನೆಲೆ ಸಂಘದ ಕಾರ್ಯ ಚಟುವಟಿಕೆಗಳನ್ನು ನಡೆಸಲು ಹಿನ್ನಡೆಯಾಗಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಣಾಮಕಾರಿ ಯಾಗಿ ಕಾರ್ಯ ನಿರ್ವಹಿಸುವ ಭರವಸೆ ನೀಡಿದರು.
ಈ ಸಂದರ್ಭ ನ್ಯಾಕ್ ಸಮಿತಿ ಸಹ ಸಂಯೋಜಕ ಮಂಜುನಾಥ ಆರ್., ಹಿರಿಯ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುಮಾ ಜಿ.ಆರ್., ಖಜಾಂಚಿ ಮೋಹನ್ ರಾಜ್, ನಿರ್ದೇಶಕ ದರ್ಶನ್ ಸೇರಿದಂತೆ ಹಿರಿಯ ವಿದ್ಯಾರ್ಥಿಗಳು ಹಾಜರಿದ್ದರು.