ಗೋಣಿಕೊಪ್ಪಲು, ಡಿ. ೧೪: ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಬೇಕು. ಆ ಮೂಲಕ ನಮ್ಮ ಪರಿಸರವನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದು ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷರಾದ ಕೊಟ್ಟಂಗಡ ವಿಜು ದೇವಯ್ಯ ಕರೆ ನೀಡಿದರು.

ಅರುವತ್ತೋಕ್ಲು ಸಮೀಪದ ಭರಣಿ ಸಭಾಂಗಣದಲ್ಲಿ ಗೋಣಿಕೊಪ್ಪಲುವಿನ ಕಾವೇರಿ ಪೊಮ್ಮಕ್ಕಡ ಕೂಟದಿಂದ ಆಯೋಜನೆಗೊಂಡಿದ್ದ ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆಯರು ತಮ್ಮ ದೈನಂದಿನ ಚಟುವಟಿಕೆಯ ನಡುವೆ ಬಿಡುವು ಮಾಡಿಕೊಂಡು ಸಂಘದೊAದಿಗೆ ಉತ್ತಮ ಒಡನಾಟ ಇಟ್ಟುಕೊಳ್ಳುವ ಮೂಲಕ ಸಮಾಜ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಹಿರಿಯ ಸದಸ್ಯರಾದ ಬೊಳ್ಳಾಜಿರ ಸುಶೀಲ ಅಶೋಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಲೊ ಇಂಡಿಯಾವನ್ನು ಕರ್ನಾಟಕದಿಂದ ಪ್ರತಿನಿಧಿಸಿ ಚಾಂಪಿಯನ್ ಪಟ್ಟ ಪಡೆದ ತಂಡದ ನಾಯಕಿ ಮಾಚಿಮಂಡ ದಮಯಂತಿ, ಮಾಸ್ಟರ್ ಆಫ್ ಗೇಮ್ಸ್ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಸಾಧನೆ ಮಾಡಿದ ಪೂದ್ರಿಮಾಡ ಸರಿತ ಮುತ್ತು ತಮ್ಮಯ್ಯ ಹಾಗೂ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯಂದು ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಭಾಜನರಾದ ಮಲಚೀರ ಯಶೋಧ ದೇವಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪೊಮ್ಮಕ್ಕಡ ಕೂಟದ ಕಾರ್ಯದರ್ಶಿ ಪ್ರತಿಷ್ಟ ಮಾದಯ್ಯ ಲೆಕ್ಕಪತ್ರ ಮಂಡಿಸಿದರು. ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಸದಸ್ಯರು ತಮ್ಮ

ಅಭಿಪ್ರಾಯ ತಿಳಿಸಿದರು. ಕಾವೇರಿ ಪೊಮ್ಮಕ್ಕಡ ಕೂಟದ ಕಾರ್ಯದರ್ಶಿ ಪ್ರತಿಷ್ಟ ಮಾದಯ್ಯ, ಖಜಾಂಚಿ ಅಡ್ಡೆಂಗಡ ಸವಿತ ನಂಜಪ್ಪ, ಹೊಟ್ಟೆಂಗಡ ತಾರಾ ವಿಶ್ವನಾಥ್, ಚಿಲ್ಲವಂಡ ರಚನಾ ಸೇರಿದಂತೆ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿರ್ದೇಶಕಿ ಚೇಂದAಡ ಸುಮಿ ಸುಬ್ಬಯ್ಯ ಪ್ರಾರ್ಥಿಸಿ, ಕಾರ್ಯದರ್ಶಿ ಪ್ರತಿಷ್ಟ ಸ್ವಾಗತಿಸಿ, ವಂದಿಸಿದರು.