ಮಡಿಕೇರಿ, ಡಿ. ೧೩: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ೬+೧ ಕುರಿ/ ಮೇಕೆ ಘಟಕ, ಪ.ಜಾತಿ ೨, ಪ.ಪಂ.೧ ಒಟ್ಟು ೩ ಘಟಕಗಳನ್ನು (ಸಹಾಯಧನ ಪರಿಶಿಷ್ಟ ಜಾತಿ/ ಪಂಗಡ ಶೇ. ೯೦, ಘಟಕ ವೆಚ್ಚ ರೂ. ೪೫ ಸಾವಿರ, ಸಹಾಯಧನ ರೂ. ೪೦,೫೦೦ ಫಲಾನುಭವಿಯ ವಂತಿಗೆ ರೂ. ೪,೫೦೦) ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ೧೮ ರಿಂದ ೬೦ ವರ್ಷದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಕುರಿ ಸಾಕಾಣಿಕೆಯಲ್ಲಿ ತೊಡಗಿಕೊಂಡ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳು ಆರ್‌ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
ಆಸಕ್ತ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ ೯೪೪೮೬೪೭೨೭೬, ವೀರಾಜಪೇಟೆ ೯೧೪೧೦೯೩೯೯೬, ಪೊನ್ನಂಪೇಟೆ ೯೪೪೯೦೮೧೩೪೩, ಸೋಮವಾರಪೇಟೆ ೯೪೪೮೬೫೫೬೬೦, ಕುಶಾಲನಗರ ೮೯೫೧೪೦೪೦೨೫ ನ್ನು ಸಂಪರ್ಕಿಸಬಹುದು.
ಅರ್ಜಿಯನ್ನು ತಾ. ೨೦ ರೊಳಗೆ ತಮ್ಮ ವ್ಯಾಪ್ತಿಯ ತಾಲೂಕಿನ ಪಶುವೈದ್ಯ ಆಸ್ಪತ್ರೆಗೆ, ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಪಿ. ಸುರೇಶ್ ಭಟ್ ತಿಳಿಸಿದ್ದಾರೆ.