ಮಡಿಕೇರಿ, ಡಿ. ೧೪: ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಚೆರಿಯಪರಂಬು ಕಲ್ಲುಮೊಟ್ಟೆ ಯುವ ಕಾಂಗ್ರೆಸ್ ಸಂಯುಕ್ತಾಶ್ರಯದಲ್ಲಿ ತಾ. ೧೭ ರಂದು ಜಿಲ್ಲಾಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಯೂತ್ ಕಾಂಗ್ರೆಸ್ ಕಪ್ - ೨೦೨೨ ನಡೆಯಲಿದೆ ಎಂದು ನಾಪೋಕ್ಲ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು - ಚೆರಿಯಪರಂಬು ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸಂಜೆ ೪ ಗಂಟೆಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದ್ದು, ರಾಜಕೀಯ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಆಡಿದ ಮೂವರು ಅತಿಥಿ ಆಟಗಾರರನ್ನು ಒಳಗೊಂಡು ನಾಕೌಟ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ೧೨ ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಪಂದ್ಯಾವಳಿಯಲ್ಲಿ ವಿಜೇತರಾದ ತಂಡಕ್ಕೆ ರೂ. ೫೦,೦೦೦ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ. ೩೦,೦೦೦ ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ವೈಯಕ್ತಿಕ ಬಹುಮಾನಗಳು ನೀಡಲಾಗುವುದು. ಇದೇ ಸಂದರ್ಭ ಸಮಾಜ ಸೇವೆಯಲ್ಲಿ ತೊಡಗಿರುವ ಗ್ರಾಮದ ಕೆಲವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಪಂದ್ಯಾವಳಿಯ ಬಗ್ಗೆ ಹೆಚ್ಚಿನ ಮಾಹಿತಿಗೆ ೯೯೬೪೬೪೬೪೩೧ ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಕಾAತ್, ಎನ್.ಎಸ್.ವಿ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಾಶೀದ್, ಚೆರಿಯಪರಂಬು - ಕಲ್ಲುಮೊಟ್ಟೆ ಯುವ ಕಾಂಗ್ರೆಸ್ ಪ್ರಮುಖರಾದ ಪಿ.ಎಂ. ಸಮೀರ್, ಯಶವಂತ್ (ಶಶಿ), ಮನಝೀರ್ ಉಪಸ್ಥಿತರಿದ್ದರು.