ನಾಪೋಕ್ಲು, ಡಿ. ೧೪: ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಂಜಿಲ ಗ್ರಾಮದ ಆಕ್ಸ್ ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿ ತನ್ಹ ಟಿ.ಎಸ್. ಅವರು ಭಾಗವಹಿಸಿ ಚಿತ್ರಕಲೆ ಮತ್ತು ಬಣ್ಣ ಹಚ್ಚುವಿಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.