ಮಡಿಕೇರಿ, ಡಿ. ೧೩: ಕೊಡಗು ಜಿಲ್ಲಾ ಬಿಜೆಪಿ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ತಾ. ೧೫ರಂದು ಶಂಕುಸ್ಥಾಪನಾ ಕಾರ್ಯ ನೆರವೇರಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಗರದ ಓಂಕಾರೇಶ್ವರ ದೇವಾಲಯ ರಸ್ತೆಯಲ್ಲಿ ಖರೀದಿಸಲಾಗಿರುವ ೮ ಸೆಂಟ್ ಜಾಗದಲ್ಲಿ ೩ ಅಂತಸ್ತಿನ ಕಟ್ಟಡವನ್ನು ೨ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಈ ಕಟ್ಟಡದಲ್ಲಿ ಪಕ್ಷದ ಅಧ್ಯಕ್ಷರ ಕೊಠಡಿ, ಪ್ರಧಾನ ಕಾರ್ಯದರ್ಶಿ ಕೊಠಡಿ, ಪದಾಧಿಕಾರಿಗಳ ಕೊಠಡಿ ಸೇರಿದಂತೆ ವಿವಿಧ ಮೋರ್ಚಾಗಳ ಕೊಠಡಿ, ಸಭಾಂಗಣ ಇತ್ಯಾದಿ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ತಾ. ೧೫ರ ಬೆಳಿಗ್ಗೆ ೧೦ ಗಂಟೆಯಿAದ ವಿವಿಧ ಪೂಜಾ ಕೈಂಕರ್ಯಗಳು ಪ್ರಾರಂಭವಾಗಲಿದ್ದು, ೧೧ ಗಂಟೆಗೆ ಬಿಜೆಪಿ ರಾಷ್ಟಿçÃಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ವರ್ಚುವಲ್ ಮೂಲಕ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ರಾಜ್ಯ ಬಿಜೆಪಿಯ ಪ್ರಮುಖರು, ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಮತ್ತಿತರರು ಭಾಗವಹಿಸಲಿದ್ದಾರೆ. ೯೦೪೮ ಚದರ ಅಡಿಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ೬ ತಿಂಗಳಲ್ಲಿ ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ರಾಬಿನ್ ದೇವಯ್ಯ ಮಾಹಿತಿಯಿತ್ತರು.

ಮುಂದಿನ ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಕೊಡಗಿನಲ್ಲಿ ಬಜೆಪಿಯಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಬಗ್ಗೆ ಪಕ್ಷದ ರಾಷ್ಟಿçÃಯ ಸಮಿತಿ ತೀರ್ಮಾನ ತೆಗೆದುಕೊಳ್ಳಲಿದ್ದು, ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರೂ ಅದನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಮುಂದಿನ ಚುನಾವಣೆಯಲ್ಲೂ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ರಾಬಿನ್ ದೇವಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಕೊಡಗಿನ ಹೋಂಸ್ಟೇಯೊAದಕ್ಕೆ ಭೇಟಿ ನೀಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ರಾಬಿನ್ ದೇವಯ್ಯ, ಜಿಲ್ಲೆಯ ಹೋಂ ಸ್ಟೇ ಮಾಲೀಕರುಗಳು ತಮ್ಮಲ್ಲಿಗೆ ಬರುವ ಪ್ರತಿಯೊಬ್ಬರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಜಿಲ್ಲಾಡಳಿತ ಕೂಡ ಈ ಬಗ್ಗೆ ನಿಗಾ ವಹಿಸಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಬಿಜೆಪಿಯ ದಕ್ಷಿಣ ಕನ್ನಡ ಉಸ್ತುವಾರಿ ಬಿ.ಬಿ. ಭಾರತೀಶ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಕಾರ್ಯದರ್ಶಿ ಸತೀಶ್, ಮಾಧ್ಯಮ ಸಹ ಸಂಚಾಲಕ ಸಜಿಲ್ ಕೃಷ್ಣ ಉಪಸ್ಥಿತರಿದ್ದರು.